Latest

ಈವರೆಗೆ ಹಿಂಬಾಲಕರಾಗಿದ್ದೆವು; ಇನ್ಮುಂದೆ ಎಚ್ಚೆತ್ತುಕೊಳ್ಳಬೇಕು ಎಂದ ಜಯಮೃತ್ಯುಂಜಯ ಸ್ವಾಮೀಜಿ

ಪ್ರಗತಿವಾಹಿನಿ ಸುದ್ದಿ; ಚಾಮರಾಜನಗರ: ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ವಿಚಾರ ಮತ್ತೆ ಚರ್ಚೆಗೆ ಬಂದಿದ್ದು, ಕೂಡಲಸಂಗಮದ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಸರ್ಕಾರದ ವಿರುದ್ಧ ಮತ್ತೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಅಗತ್ಯ. ನಮಗೆ ಶಿಕ್ಷಣ, ಉದ್ಯೋಗಕ್ಕಾಗಿ 2ಎ ಮೀಸಲಾತಿ ಬೇಕು. 6 ತಿಂಗಳಲ್ಲಿ ಮೀಸಲಾತಿ ಕೊಡುವುದಾಗಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಧಾನಸೌಧದಲ್ಲೇ ಘೋಷಿಸಿದ್ದರು. ಆದರೆ ಈವರೆಗೆ ಯಾವುದೇ ಬೆಳವಣಿಗೆಗಳು ನಡೆದಿಲ್ಲ ಎಂದು ಚಾಮರಾಜನಗರದಲ್ಲಿ ಗುಡುಗಿದ್ದಾರೆ.

ಮುಂದೆ ನಮ್ಮವರು ಬಿಟ್ಟರೆ ಬೆರೆ ಯಾರೂ ಸಿಎಂ ಆಗಲ್ಲ. ಪಂಚಮಸಾಲಿ, ಗೌಡ ಲಿಂಗಾಯತರನ್ನ ಬಿಟ್ಟರೆ ಯಾರೂ ಆಗಲ್ಲ. ನಾವು ಇಲ್ಲಿಯವರೆಗೆ ಹಿಂಬಾಲಕರಾಗಿದ್ದೇವೆ. ಇನ್ನುಮುಂದೆ ನಾವು ಎಚ್ಚೆತ್ತುಕೊಳ್ಳಬೇಕಿದೆ. ಮೀಸಲಾತಿ ಹೋರಾಟ ಮುಂದುವರೆಸಬೇಕಿದೆ ಎಂದು ಹೇಳಿದ್ದಾರೆ.

ಯತ್ನಾಳ್ ಕಾರಿಗೆ ಮುತ್ತಿಗೆ ಹಾಕಿ ಕಾರ್ಯಕರ್ತರ ಆಕ್ರೋಶ

ಸಿಎಂ ಯಡಿಯೂರಪ್ಪ ಭ್ರಷ್ಟಾಚಾರ ದಾಖಲೆ ಶೀಘ್ರ ಬಿಡುಗಡೆ
ಗುರುವಾರ ಕೇಂದ್ರ ಸಚಿವ ಸಂಪುಟ ಪುನಾರಚನೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button