*ಮೀಸಲಾತಿ ಘೋಷಿಸಿದರೆ ಸಿಎಂ ಗೆ ತುಲಾಬಾರ; ಇಲ್ಲವಾದಲ್ಲಿ ಹರ್ ಹರ್ ಮಹಾದೇವ್ ಎಂದು ಹೋರಾಟ ಎಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: 2ಎ ಮೀಸಲಾತಿಗಾಗಿ ಆಗ್ರಹಿಸಿ ಪಂಚಮಸಾಲಿ ಸಮುದಾಯದ ಮುಖಂಡರು ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಹೋರಾಟ ತೀವ್ರಗೊಳಿಸಿದ್ದು, ಸರ್ಕಾರ ಇಕ್ಕಟ್ಟಿಗೆ ಸಿಲುಕಿದೆ.
ಪಂಚಮಸಾಲಿ ಸಮುದಾಯದ ಹೋರಾಟದ ಹಿನ್ನೆಲೆಯಲ್ಲಿ ಇಂದು ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಭೆಯಲ್ಲಿ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಬಗ್ಗೆ ಚರ್ಚೆ ನಡೆಯಲಿದೆ. ಸಭೆಯಲ್ಲಿ ಮೀಸಲಾತಿ ಘೋಷಣೆಗೆ ಅನುಮೋದನೆ ಸಿಗಲಿದೆಯೇ ಕಾದುನೋಡಬೇಕಿದೆ.
ಈ ನಡುವೆ ಸುದ್ದಿಗಾರರೊಂದಿಗೆ ಮಾತನಾಡಿರುವ ಬಸವ ಜಯಮೃತ್ಯುಂಜಯ ಸ್ವಾಮೀಜಿ, ಮೀಸಲಾತಿ ಘೋಷಣೆ ಮಾಡುವವರೆಗೂ ನಮ್ಮ ಹೋರಾಟದಿಂದ ಹಿಂದೆ ಸರಿಯಲ್ಲ. ತಡ ರಾತ್ರಿ ಸಿಎಂ ಬೊಮ್ಮಾಯಿ ಅವರು ವರದಿ ತರಿಸಿಕೊಂಡಿದ್ದಾರೆ. ಇಂದು ನಡೆಯುವ ಸಂಪುಟ ಸಭೆಯಲ್ಲಿ ಮೀಸಲಾತಿಗೆ ಅನುಮೋದನೆ ಸಿಗುತ್ತದೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.
ಮೀಸಲಾತಿ ಘೋಷಣೆಯಾದರೆ ಮುಖ್ಯಮಂತ್ರಿ ಬೊಮ್ಮಾಯಿ ಅವರಿಕೆ ಕಲ್ಲುಸಕ್ಕರೆ ತುಲಾಭಾರ ಮಾಡುತ್ತೇವೆ. ಇಲ್ಲವಾದಲ್ಲಿ ಹರ್ ಹರ್ ಮಹಾದೇವ್ ಎಂದು ಹೋರಾಟ ಇನ್ನಷ್ಟು ತೀವ್ರಗೊಳಿಸುತ್ತೇವೆ. ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಎಲ್ಲವೂ ಸಿಎಂ ಹಾಗೂ ಸರ್ಕಾರದ ಕೈಯಲ್ಲಿದೆ. ಮೀಸಲಾತಿ ಘೋಷಿಸಿ ಸಂಭ್ರಮಕ್ಕೆ, ವಿಜಯೋತ್ಸ ಮಾಡಿಸಿಕೊಳ್ಳುತ್ತೀರೋ ಅಥವಾ ಬಂಡಾಯ ಎದುರಿಸಲು ಸಿದ್ದರಾಗುತ್ತೀರೋ ನಿರ್ಧರಿಸಲಿ ಎಂದು ಎಚ್ಚರಿಕೆ ನೀಡಿದ್ದಾರೆ.
ಪಂಚಮಸಾಲಿ ಸಮಾವೇಶ ಹಿನ್ನೆಲೆ: ವಾಹನಗಳ ಮಾರ್ಗ ಬದಲಾವಣೆ
https://pragati.taskdun.com/background-of-panchmasali-conference-change-of-route-of-vehicles/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ