Cancer Hospital 2
Beereshwara 36
LaxmiTai 5

ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ: ಆಯೋಗದ ವರದಿ ಸಲ್ಲಿಕೆಯ ನಂತರ ಕ್ರಮ: ಸಿಎಂ

ನೀತಿ ಸಂಹಿತೆ ಜಾರಿಯಿಂದ ಮಾಹಿತಿ ಪಡೆಯಲು ವಿಳಂಬ

Anvekar 3
GIT add 2024-1

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ:  ಹಿಂದುಳಿದ ವರ್ಗಗಳ ಆಯೋಗವು ವರದಿ ನೀಡಿದ ನಂತರ ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡುವ ಬಗ್ಗೆ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬೆಳಗಾವಿಯಲ್ಲಿ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ಕುರಿತಂತೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೂಡಲಸಂಗಮ ಕ್ಷೇತ್ರದ ಲಿಂಗಾಯತ ಪಂಚಮಸಾಲಿ ಜಗದ್ಗುರುಗಳು ಹಾಗೂ ಸಮಾಜದ ಶಾಸಕರೊಂದಿಗೆ ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡುವ ಬಗ್ಗೆ ಚರ್ಚಿಸಲಾಗಿದೆ.

Emergency Service

ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ಅನ್ವಯ ಸಂವಿಧಾನಾತ್ಮಕವಾಗಿ ಪರಿಶೀಲಿಸಲಾಗುವುದು. ಹಿಂದುಳಿದ ವರ್ಗಗಳ ಆಯೋಗಕ್ಕೆ ಈ ಬಗ್ಗೆ ಶಿಫಾರಸ್ಸು ಮಾಡಲಾಗಿದೆ. ವರದಿ ಬಂದ ಕೂಡಲೇ ಸಚಿವ ಸಂಪುಟ ಸಭೆಯಲ್ಲಿ ವಿಷಯ ಮಂಡಿಸಲಾಗುವುದು ಎಂದರು.

ಚುನಾವಣೆ ನೀತಿ ಸಂಹಿತೆ ಇದ್ದುದರಿಂದ ಎಲ್ಲೆಡೆಯಿಂದ ಮಾಹಿತಿ ಪಡೆಯಲು ಸಾಧ್ಯವಾಗಿಲ್ಲ ಎಂದು ಸ್ಪಷ್ಟಪಡಿಸಿದರು.

ರಮೇಶ್ ಕುಮಾರ್ ಹೇಳಿಕೆ ಅಕ್ಷಮ್ಯ ಅಪರಾಧ; ಯಡಿಯೂರಪ್ಪ ಆಕ್ರೋಶ

Bottom Add3
Bottom Ad 2