ಬೆಂಗಳೂರು: ಲಿಂಗಾಯಿತ ಪಂಚಮಸಾಲಿಗಳಿಗೆ 2ಸಿ, 2ಡಿ ಮೀಸಲಾತಿ ಸಂಬಂಧ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ನೀಡಿದ್ದ ಮಧ್ಯಂತರ ಆದೇಶವನ್ನು ಹೈಕೋರ್ಟ್ ತೆರವುಗೊಳಿಸಿದೆ.
2ಎ ಮಿಸಲಾತಿಯಲ್ಲಿ ಯಾವುದೇ ಬದಲಾವಣೆ ಮಡುವುದಿಲ್ಲ ಎಂದು ಹೈಕೋರ್ಟ್ ಗೆ ಕೇಂದ್ರ ಸರ್ಕಾರದ ಸಾಲಿಸಿಟರ್ ಭರವಸೆ ನೀಡಿದರು. ಕೇಂದ್ರದ ಭರವಸೆ ಹಿನ್ನೆಲೆಯಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಹೊರಡಿಸಿದ್ದ ಮಧ್ಯಂತರ ಆದೇಶವನ್ನು ಹೈಕೋರ್ಟ್ ತೆರವುಗೊಳಿಸಿದೆ. ಕೇಂದ್ರ ಸರ್ಕಾರಕ್ಕೆ ಲಿಖಿತ ಹೇಳಿಕೆ ನೀಡುವಂತೆ ಸೂಚಿಸಿದೆ.
ಈ ಮೂಲಕ ಪಂಚಮಸಾಲಿ ಸಮುದಾಯಕ್ಕೆ 2ಸಿ, 2ಡಿ ಮೀಸಲಾತಿ ನೀಡಲು ಯಾವುದೇ ಅಡ್ಡಿಯಿಲ್ಲ ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ