Kannada NewsKarnataka NewsLatest

*2ಎ ಮೀಸಲಾತಿ: ಜಯ ಬಸವ ಮೃತ್ಯುಂಜಯ ಸ್ವಾಮೀಜಿ ನೇತೃತ್ವದ ನಿಯೋಗದೊಂದಿಗೆ ಸಿಎಂ ಚರ್ಚೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಂಚಮಸಾಲಿ 2ಎ ಮೀಸಲಾತಿ ಸಂಬಂಧಪಟ್ಟಂತೆ ಜಗದ್ಗುರು ಜಯ ಬಸವ ಮೃತ್ಯುಂಜಯ ಸ್ವಾಮೀಜಿ ನೇತೃತ್ವದ ಸಮಾಜದ ನಾಯಕರ ನಿಯೋಗದ ಜತೆ ಚರ್ಚೆ ನಡೆಸಿದರು.

Home add -Advt

ಚಳಿಗಾಲದ ಅಧಿವೇಶನ ಮುಗಿಯುತ್ತಿದ್ದಂತೆ ಕಾನೂನು ತಜ್ಞರು ಮತ್ತು ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಹಾಗೂ ಅಡ್ವೊಕೇಟ್ ಜನರಲ್ ಅವರ ಜತೆ ಸಭೆ ನಡೆಸಲಾಗುವುದು ಎಂದು ಮುಖ್ಯಮಂತ್ರಿಗಳು ನಿಯೋಗಕ್ಕೆ ಭರವಸೆ ನೀಡಿದರು.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ , ಹಿರಿಯ ಶಾಸಕರಾದ ಬಿ.ಆರ್.ಪಾಟೀಲ್ , ವಿಜಯಾನಂದ ಕಾಶಪ್ಪನವರ್, ಬಸವನಗೌಡ ಪಾಟೀಲ್ ಯತ್ನಾಳ್, ವಿನಯ್ ಕುಲಕರ್ಣಿ, ಸಿ.ಸಿ.ಪಾಟೀಲ್, ವಿಧಾನ‌ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಸೇರಿದಂತೆ ಪಂಚಮಸಾಲಿ ಸಮಾಜದ ಹಲವು ಮುಖಂಡರು ನಿಯೋಗದಲ್ಲಿದ್ದರು.

Related Articles

Back to top button