Politics

*ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆ ನಿರ್ಧಾರಗಳ ಹೈಲೈಟ್ಸ್*

ಪ್ರಗತಿವಾಹಿನಿ ಸುದ್ದಿ: ಮಲೆ ಮಹದೇಶ್ವರ ಬೆಟ್ಟದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆದಿದ್ದು, ಹಲವು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ವಿವರಗಳ ಹೈಲೈಟ್ಸ್ ಗಳು…

ಕಲ್ಬುರ್ಗಿ ವಿಭಾಗದ ಕ್ಯಾಬಿನೆಟ್ ಸಭೆ ಬಳಿಕ ಇಂದು ಮೈಸೂರು ವಿಭಾಗದ ಸಂಪುಟ ಸಭೆ ನಡೆಸಿದ್ದೇವೆ. ಇದೇ ರೀತಿ ಬೆಳಗಾವಿ ವಿಭಾಗದ ಸಂಪುಟ ಸಭೆ ಬಿಜಾಪುರದಲ್ಲಿ, ಬೆಂಗಳೂರು ವಿಭಾಗದ ಸಭೆ ನಂದಿ ಬೆಟ್ಟದಲ್ಲಿ ನಡೆಯಲಿದೆ

*ಕಾಶ್ಮೀರ ಭಯೋತ್ಪಾದಕ ದಾಳಿಯಲ್ಲಿ ಮೃತರಾದ ಎಲ್ಲ ಹುತಾತ್ಮರಿಗೆ ಶ್ರದ್ಧಾಂಜಲಿ ಮತ್ತು ಧರ್ಮಗುರು ಪೋಪ್ ಅವರ ನಿಧನಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಯಿತು

*3647 ಕೋಟಿ 42 ಲಕ್ಷ ಮೌಲ್ಯದ ಕಾಮಗಾರಿಗೆ ಕ್ಯಾಬಿನೆಟ್ ಅಂಗೀಕಾರ.

Home add -Advt

*PWD, ಬೃಹತ್-ಸಣ್ಣ ನೀರಾವರಿ ಇಲಾಖೆ, ಇಂಧನ ಇಲಾಖೆ, ಆರೋಗ್ಯ ಇಲಾಖೆ, ಗ್ರಾಮೀಣಾಭಿವೃದ್ಧಿ, ಬುಡಕಟ್ಟು ಅಭಿವಧ್ಧಿ, ಟ್ರೈಬಲ್ ಹಳ್ಳಿಗಳಿಗೆ ರಸ್ತೆಗಳಿಗೆ

*1787 ಕೋಟಿ ನೀರಾವರಿ, sc/st ಜನರ ವಸತಿ, ಕೇರಿಗಳಿಗೆ ಮೂಲಭೂತ ಸೌಕರ್ಯ ಒದಗಿಸಲಾಗುವುದು.

*ಮಾನವ-ಪ್ರಾಣಿ ಸಂಘರ್ಷ ತಡೆಯಲು 210 ಕೋಟಿ. ರೈಲ್ವೇ ಬ್ಯಾರಿಕೇಡ್ ಪೂರ್ಣಗೊಳಿಸಲಾಗುವುದು.

*ಕುಡಿಯುವ ನೀರಿಗಾಗಿ 315 ಕೋಟಿ, ಆರೋಗ್ಯ ಸುಧಾರಣೆಗೆ 228 ಕೋಟಿ, ಕೊಳ್ಳೇಗಾಲದಲ್ಲಿ ಜಿಲ್ಲಾ ಆಸ್ಪತ್ರೆ ನಿರ್ಮಾಣಕ್ಕೆ ಸಂಪುಟ ಅಂಗೀಕಾರ. 250 ಬೆಡ್ ಗಳ ಜಿಲ್ಲಾಸ್ಪತ್ರೆ.

*ಪ್ರವಾಸೋದ್ಯಮ ಇಲಾಖೆಗೆ 300 ಕೋಟಿ.

*ಹನೂರಿನಲ್ಲಿ ಹೊಸ ತಾಲ್ಲೂಕಿಗೆ ತಾಲ್ಲೂಕಾ ಆಸ್ಪತ್ರೆ, ತಾಲ್ಲೂಕಾ ಭವನ ನಿರ್ಮಾಣ.

*ಚಿಕ್ಕಲ್ಲೂರಿನಲ್ಲಿ ರಾಜಪ್ಪಾಜಿ, ಸಿದ್ದಪ್ಪಾಜಿ, ಮಂಟೇಸ್ವಾಮಿ ಅಭಿವೃದ್ಧಿ ಕೇಂದ್ರ.

*ವರುಣಾದ ಇಳಿಯಾಲದಲ್ಲಿ ಅಂತರಾಷ್ಟ್ರೀಯ ಕ್ರೀಡಾಂಗಣಕ್ಕೆ ಜಾಗ ಕೊಡಲು ಅಂಗೀಕಾರ

*40 ಕೋಟಿ ಅಂದಾಜಿನಲ್ಲಿ ಬದನವಾಳು ಅಭಿವೃದ್ಧಿ.

*ಮೈಸೂರಿನ ವಿಮಾನ ನಿಲ್ದಾಣದ ರನ್ ವೇ ವಿಸ್ತರಣೆಗೆ 101 ಕೋಟಿ ಮೊತ್ತದ ಜಾಗ ನೀಡಲಾಗುವುದು.

*ಮೈಸೂರಿನ ಅಟಾರ್ಹಾ ಕಚೇರಿಯ 100 ಕೋಟಿ ವೆಚ್ಚದ ಮ್ಯೂಸಿಯಂ ನಿರ್ಮಾಣಕ್ಕೆ ಒಪ್ಪಿಗೆ.

*ಮೈಸೂರು ತಾಲ್ಲೂಕಿನ ಇಲವಾಲದಲ್ಲಿ ಅಂತರಾಷ್ಟ್ರೀಯ ಕ್ರೀಡಾಂಗಣ ನಿರ್ಮಿಸಲು ಜಾಗ ಒದಗಿಸಲಾಗಿದೆ.‌

*ಗುಂಡ್ಲುಪೇಟೆ 110 ಕೆರೆಗಳಿಗೆ ನೀರು ತುಂಬಿಸುವ 475 ಕೋಟಿ ವೆಚ್ಚ.

*ಚಾಮರಾಜನಗರದಲ್ಲಿ ಹೊಸ ಪ್ರವಾಸಿ ಮಂದಿರ ನಿರ್ಮಾಣ, ಚಾಮರಾಜನಗರ ಟೌನ್ ನಲ್ಲಿ ಕುಡಿಯುವ ನೀರು, ಒಳ ಚರಂಡಿ ನಿರ್ಮಾಣ

*ಚಾಮರಾಜನಗರದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ 15 ಕೋಟಿ.

*ಒಟ್ಟಾಗಿ, 3647.62 ಕೋಟಿ ವೆಚ್ಚದಲ್ಲಿ ಮೈಸೂರು ವಿಭಾಗದಲ್ಲಿ ತುರ್ತು ಅಭಿವೃಧ್ಧಿ ಕಾರ್ಯಗಳು ನಡೆಯಲಿವೆ.

Related Articles

Back to top button