*ಲಕ್ಷ್ಮೀ ಹೆಬ್ಬಾಳಕರ್ ಸೇರಿ ಐವರಿಗೆ ಮಂತ್ರಿಸ್ಥಾನ ಕೊಡಿ; ಕಾಂಗ್ರೆಸ್ ಹಾಗೂ ಬಿಜೆಪಿ ವರಿಷ್ಠರಿಗೆ ಪಂಚಮಸಾಲಿ ರಾಜ್ಯ ಕಾರ್ಯಕಾರಿಣಿಯ 2 ಪ್ರಮುಖ ಒತ್ತಾಯ*
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : *ಬೆಂಗಳೂರಿನಲ್ಲಿ ಇಂದು (ಮೇ 23 ರಂದು) *ಲಿಂಗಾಯತ ಪಂಚಮಸಾಲಿ* *ನೂತನ ಶಾಸಕರುಗಳ ಅಭಿನಂದನಾ ಸಮಾರಂಭ ಕುರಿತು ಚರ್ಚಿಸುವ ಪೂರ್ವಭಾವಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಿತು. ಸಭೆಯಲ್ಲಿ ಈ ಕೆಳಗಿನ ನಿರ್ಣಾಯ ತೆಗೆದುಕೊಳ್ಳಲಾಯಿತು*
1) *ಲಿಂಗಾಯತ ಪಂಚಮಸಾಲಿ ಸಮಾಜದ ಬಂಧುಗಳ ಒತ್ತಾಯದಂತೆ , ಮೀಸಲಾತಿಗಾಗಿ ಮುಂಚೂಣಿಯಲ್ಲಿ ಹೋರಾಡಿದಂತಹ ಹುನಗುಂದ ಶಾಸಕರಾದ ವಿಜಯಾನಂದ ಕಾಶಪ್ಪನವರ್ , ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ , ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಒಳಗೊಂಡಂತೆ ಒಟ್ಟು ಐದು ಶಾಸಕರಿಗೆ ಸಚಿವ ಸ್ಥಾನ ಕಲ್ಪಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ , ಉಪಮುಖ್ಯಮಂತ್ರಿ ಶಿವಕುಮಾರ್ ಹಾಗೂ ಕಾಂಗ್ರೆಸ್ ವರಿಷ್ಠರಾದ ಮಲ್ಲಿಕಾರ್ಜುನ ಖರ್ಗೆಯವರಿಗೆ ಒತ್ತಾಯಿಸಲಾಯಿತು*.
2) *ಬಿಜೆಪಿ ಪಕ್ಷದ ರಾಜ್ಯ ಅಧ್ಯಕ್ಷ ಅಥವಾ ವಿರೋಧ ಪಕ್ಷದ ಸ್ಥಾನಕ್ಕೆ ಸಮರ್ಥ ಲಿಂಗಾಯತ ಪಂಚಮಸಾಲಿ ಶಾಸಕರಿಗೆ ಅವಕಾಶ ಮಾಡಿಕೊಡಬೇಕೆಂದು ರಾಷ್ಟ್ರೀಯ ಬಿಜೆಪಿ ವರಿಷ್ಠರಿಗೆ ಒತ್ತಾಯಿಸಲಾಯಿತು*.
3) *ನೂತನ ಶಾಸಕರ ಅಭಿನಂದನಾ ಸಮಾರಂಭವನ್ನು ಹಾಗೂ ಮೀಸಲಾತಿ ಹಕ್ಕೊತ್ತಾಯ ಸಮಾರಂಭವನ್ನು ಕೂಡಲಸಂಗಮದಲ್ಲಿ ಜೂನ್ ತಿಂಗಳಲ್ಲಿ ನೆರವೇರಿಸಲು ತೀರ್ಮಾನಿಸಲಾಯಿತು*.
*ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಜಗದ್ಗುರು ಮಹಾಪೀಠದ ಪ್ರಥಮ ಜಗದ್ಗುರುಬಸವ ಜಯಮೃತ್ಯುಂಜಯ ಸ್ವಾಮೀಜಿಯವರ ಸಾನಿಧ್ಯದಲ್ಲಿ ನಡೆದ ಸಭೆಯಲ್ಲಿ ಶ್ರೀಗಳು ಸರ್ಕಾರಕ್ಕೆ ಒತ್ತಾಯಿಸಿದರು*.
*ರಾಷ್ಟ್ರೀಯ ಅಧ್ಯಕ್ಷರಾದ ಹಾಗೂ ಶಾಸಕರಾದ ಡಾ. ವಿಜಯಾನಂದ ಕಾಶಪ್ಪನವರ್ ಅಧ್ಯಕ್ಷತೆಯಲ್ಲಿ ಜರುಗಿತು*.
*ನೂತನ ಶಾಸಕರುಗಳಾದ ಧಾರವಾಡದ ವಿನಯ ಕುಲಕರ್ಣಿ* , *ಬೆಳಗಾವಿಯ ಲಕ್ಷ್ಮೀ ಹೆಬ್ಬಾಲ್ಕರ್* , *ಕಾಗವಾಡದ ರಾಜುಗೌಡ ಕಾಗೆ* , *ದೇವರ ಹಿಪ್ಪರಗಿಯ ರಾಜುಗೌಡ ಪಾಟೀಲ್* , *ಸಿಂದಗಿಯ ಅಶೋಕ ಮನಗೂಲಿ* , *ಕಿತ್ತೂರಿನ ಬಾಬಾ ಸಾಹೇಬ್ ಪಾಟೀಲ* , *ಮಾಜಿ ಶಾಸಕ ನಂದಿಹಳ್ಳಿ ಹಾಲಪ್ಪ , ನಿಗಮದ ಮಾಜಿ ಅಧ್ಯಕ್ಷ ಎಂ ಎಸ್ ರುದ್ರಗೌಡ , ವಿವಿಧ ಜನಪ್ರತಿನಿಧಿಗಳು* ,*ಪಂಚಮಸಾಲಿ – ಗೌಡ – ಮಲೆಗೌಡ ದೀಕ್ಷಾ – ಲಿಂಗಾಯತ ರಾಷ್ಟ್ರೀಯ , ರಾಜ್ಯ , ಜಿಲ್ಲಾ ವಿವಿಧ ಘಟಕಗಳ ಪದಾಧಿಕಾರಿಗಳು ಭಾಗವಹಿಸಿದ್ದರು*.
ಡಾ.ಬಿಎಸ್ ಪಾಟೀಲ್ ಪಂಚಸೇನಾ ರಾಷ್ಟ್ರೀಯ ಅಧ್ಯಕ್ಷರು ಬೆಂಗಳೂರು , ಬೆಂಗಳೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪುಟ್ಟರಾಜ, ರಾಷ್ಟಿಯ ಅಧ್ಯಕ್ಷ ಮಲ್ಲಣಗೌಡರು , ಶಿವಪುತ್ರ ಮಲ್ಲೇವಾಡ್ ನಗರ ಅಧ್ಯಕ್ಷರು , ದಾನಪ್ಪಗೌಡರು , ಕಾಂತೇಶ್ , ಮಲ್ಲಣ ಗೌಡ , ಶೈಲೇಂದ್ರ ಪಾಟೀಲ್ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ