Karnataka News

*ಪಾನಿಪುರಿ ಮಾರುತ್ತಿದ್ದ ಗಾಡಿಯಲ್ಲಿ ಸಿಲಿಂಡರ್ ಸ್ಫೋಟ*

ಪ್ರಗತಿವಾಹಿನಿ ಸುದ್ದಿ: ಪಾನಿಪುರಿ ಮಾರುತ್ತಿದ್ದವರ ಗಾಡಿಯ ಸಿಲಿಂಡರ್ ಬ್ಲಾಸ್ಟ್ ಆಗಿ ಗಾಡಿಗೆ ಬೆಂಕಿ ಹತ್ತಿಕೊಂಡ ಘಟನೆ ಹುಬ್ಬಳ್ಳಿ ನಗರದ ಸಿ ಬಿ ಟಿ ಬಸ್ ಸ್ಟ್ಯಾಂಡ್ ಬಳಿ ನಡೆದಿದೆ.

ಬಸ್ ಹತ್ತಲು ಜನರು ಕಿಕ್ಕಿರಿದು ಸೇರಿದ್ದರು. ಇದೇ ಸಂದರ್ಭದಲ್ಲಿ ಸಿಲಿಂಡರ್ ಸ್ಪೋಟಗೊಂಡಿದೆ. ಈ ಸಂದರ್ಭದಲ್ಲಿ ಜನರು ಭಯಭೀತರಾಗಿದ್ದು, ದಿಕ್ಕಾಪಾಲಾಗಿ ಓಡಿ ಹೋಗಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳೀಯರು ನೀರು ಹಾಕಿ ಬೆಂಕಿ ಆರಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button