Belagavi NewsBelgaum NewsSports

*ರಾಷ್ಟ್ರಮಟ್ಟದಲ್ಲಿ ವಿದ್ಯಾರ್ಥಿ ಸಾಧನೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಭಿನಂದನೆ*

ಪ್ರಗತಿವಾಹಿನಿ ಸುದ್ದಿ: ಪ್ಯಾರಾ ಸ್ವಿಮ್ಮಿಂಗ್ ನಲ್ಲಿ ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೋಮವಾರ ಅಭಿನಂದಿಸಿ ಶುಭ ಕೋರಿದರು.

ಬೆಳಗಾವಿ‌ ಮಾಹೇಶ್ವರಿ ಅಂಧ ಮಕ್ಕಳ ಶಾಲೆಯ 8ನೇ ತರಗತಿಯ ಪ್ರಜ್ವಲ್ ಸು. ಹನುಮನಟ್ಟಿ ಎಂಬ ವಿದ್ಯಾರ್ಥಿ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಪ್ಯಾರಾ ಸ್ವಿಮಿಂಗ್ ಚಾಂಪಿಯನ್ ಷಿಪ್ ನ ವಿವಿಧ ಪ್ರಿ ಸ್ಟೈಲ್ ಹಾಗೂ ಬ್ಯಾಕ್ ಸ್ಟ್ರೋಕ್ ಈಜು ಸ್ಪರ್ಧೆಗಳಲ್ಲಿ ಭಾಗವಹಿಸಿ, ಒಟ್ಟು 6 ಚಿನ್ನದ ಪದಕಗಳನ್ನು ಪಡೆದುಕೊಂಡಿದ್ದಾನೆ.

ಬೆಳಗಾವಿ ಗ್ರಾಮೀಣ ಕ್ಷೇತ್ರದ ಕೆಕೆ ಕೊಪ್ಪ ಗ್ರಾಮದ ಪ್ರಜ್ವಲ್ ಅಪ್ಪಟ ಹಳ್ಳಿ ಪ್ರತಿಭೆಯಾಗಿದ್ದು, ಭಾಗಶಃ ಅಂಧನಾಗಿದ್ದರು ಕೂಡ ಛಲ ಬಿಡದೆ ಸತತ ಪ್ರಯತ್ನ, ಶಿಕ್ಷಕರ ಮಾರ್ಗದರ್ಶನದ ಫಲವಾಗಿ 6 ಚಿನ್ನದ ಪದಕಗಳನ್ನು ಪಡೆದಿದ್ದಾನೆ. ಈತನ ಸಾಧನೆಯ ಬಗ್ಗೆ ಮಾಹಿತಿ ಪಡೆದ ಸಚಿವರು, ವಿದ್ಯಾರ್ಥಿಗೆ ಅಭಿನಂದಿಸಿ, ಮುಂದಿನ ಭವಿಷ್ಯಕ್ಕೆ ಶುಭ ಕೋರಿದರು. ಜೊತೆಗೆ ಅಗತ್ಯವಾದ ಎಲ್ಲ ರೀತಿಯ ನೆರವು ನೀಡುವ ಭರವಸೆ ನೀಡಿದರು.


ಈ ವೇಳೆ ಮಾಹೇಶ್ವರಿ ಅಂಧ ಮಕ್ಕಳ ಶಾಲೆಯ ದೈಹಿಕ ಶಿಕ್ಷಕರಾದ ಸುರೇಶ ಸು ಮಾದಿಗರ, ಮುಖ್ಯೋಪಾಧ್ಯಾಯರಾದ ಅನಿತಾ ಗಾವಡೆ, ಸಂಗೀತ ಶಿಕ್ಷಕಿ ಸ್ಮಿತಾ ಮಿಟಗಾರ ಮುಂತಾದವರು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button