Politics

*ಬೆಳ್ಳಂ ಬೆಳಗ್ಗೆ ಗೃಹ ಸಚಿವ ಪರಮೇಶ್ವರ್ ಗರಂ ಆಗಿದ್ದು ಯಾಕೆ?*

ಪ್ರಗತಿವಾಹಿನಿ ಸುದ್ದಿ: ಖಾತೆ ಬದಲಾವಣೆಗೆ ಮನವಿ ಮಾಡಿರುವ ವದಂತಿ ಬಗ್ಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಗರಂ ಆಗಿದ್ದು, ಯಾರು ಹೇಳಿದ್ದು ನಿಮಗೆ ಎಂದು ಗುಡುಗಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ನಾನು ಖಾತೆ ಬದಲಾವಣೆ ಬಗ್ಗೆ ಕೇಳಿದ್ದೇನೆ ಅನ್ನೋ ವಿಚಾರ ಹೇಳಿದ್ಯಾರು ಎಂದು ಪ್ರಶ್ನಿಸಿದ್ದಾರೆ.

ಒಬ್ಬರ ವ್ಯಕ್ತಿತ್ವವನ್ನು ಕೊಲೆ ಮಾಡಬಾರದು, ಇದು ಶೋಭೆ ತರಲ್ಲ. ನಾನು ಸಂಯಮದಿಂದಲೇ ನಡೆದುಕೊಂಡಿದ್ದೇನೆ. ಖಾತೆ ಬದಲಾವಣೆಗೆ ಕೇಳಿದ್ದೇನೆ ಎಂಬುದು ಸುಳ್ಳು. ಏನೇ ಇದ್ದರೂ ನನ್ನನ್ನೇ ಕೇಳಬೇಕು. ಒಬ್ಬರ ವ್ಯಕ್ತಿತ್ವದ ಬಗ್ಗೆ ಅನಗತ್ಯವಾಗಿ ಸುಳ್ಳು ಹಬ್ಬಿಸಬಾರದು ಎಂದು ಗರಂ ಆದರು.

ನನ್ನ ಪತ್ನಿ ಬಳಿ ಕೂಡ ರಾಜಕೀಯ ವಿಚಾರವನ್ನು ಮಾತನಾಡಲ್ಲ. ಖಾತೆ ಬದಲಾಯಿಸಿ ಅಂತಾ ಸಿಎಂ ಬಳಿ ಕೇಳಿದ್ದೇನೆ ಎಂದು ವದಂತಿ ಹಬ್ಬಿಸಲಾಗುತ್ತಿದೆ ಎಂದು ಗುಡುಗಿದರು.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button