Karnataka NewsLatestPolitics

*ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಕಾಂಗ್ರೆಸ್ ಸರ್ಕಾರ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ರೆ. ಸರ್ಕಾರದಲ್ಲಿ ಖಾಲಿ ಇರುವ ಹುದ್ದೆಗಳನ್ನು ಹಂತ ಹಂತವಾಗಿ ತುಂಬುತ್ತೇವೆ ಎಂದು ಚುನಾವಣೆ ಪ್ರಣಾಳಿಕೆಯಲ್ಲಿಯೇ ನಾವು ಹೇಳಿದ್ದೆವು. ಆದರೆ ಅನೇಕ ಕಾರಣಗಳಿಂದ ಅದು ವಿಳಂಬವಾಗಿದೆ. ಇದೀಗ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ ಎಂದು ಡಿಸಿಎಂ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಬೆಂಗಳೂನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್, ನೇಮಕಾತಿ ವಿಚಾರದಲ್ಲಿ ಒಳ ಮೀಸಲಾತಿಯೇ ದೊಡ್ಡ ಸಮಸ್ಯೆಯಾಗಿತ್ತು. ಆದರೀಗ ಒಟ್ಟು 72,000 ಹುದ್ದೆಗಳಿಗೆ ನೇಮಕ ಸಂಬಂಧ ತೀರ್ಮಾನಿಸಲಾಗಿದೆ ಎಂದು ​ ತಿಳಿಸಿದ್ದಾರೆ.

ಈ ಬಗ್ಗೆ ಇಲಾಖೆಗಳಿಗೆ ನೋಟಿಫಿಕೇಶನ್​​ಗೂ ಸೂಚಿಸಲಾಗಿದೆ. ಕಂದಾಯ ಇಲಾಖೆಗಳಿಗೂ ನೇಮಕಾತಿಗೆ ಸೂಚಿಸಲಾಗಿದೆ. ಅದೇ ರೀತಿ ಶಿಕ್ಷಕರು,ವೈದ್ಯರು, ನರ್ಸ್, ಇಂಜಿನಿಯರ್ಸ್ ಸೇರಿದಂತೆ ಎಲ್ಲಾ ಇಲಾಖೆಗಳಲ್ಲಿಯೂ ವಿಳಂಬ ಮಾಡದೇ ನೇಮಕಾತಿಗೆ ಸೂಚಿಸಲಾಗಿದೆ. ಸಚಿವ ಸಂಪುಟ ಸಭೆಯಲ್ಲೂ ಈ ಬಗ್ಗೆ ಚರ್ಚೆಯಾಗಿದ್ದು, ಅದಕ್ಕಾಗಿಯೇ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಬ್ಬರು ಅಧಿಕಾರಿಗಳನ್ನು ನೇಮಕ ಮಾಡಿದ್ದಾರೆ. ಉಮಾಮಹದೇವನ್ ಹಾಗೂ ಗೌರವ್ ಗುಪ್ತಾ ಅವರನ್ನು ನೇಮಕಮಾಡಲಾಗಿದೆ ಎಂದರು.

ನಮ್ಮ ಉದ್ದೇಶವೇನೆಂದರೆ ರಾಜ್ಯದಲ್ಲಿ ಸಾವಿರಾರು ಸಂಖ್ಯೆಯಲ್ಲಿ ನಿರುದ್ಯೋಗಿ ಯುವಕರಿದ್ದಾರೆ ಅವರೆಲ್ಲರೂ ಹಲವು ಸಂದರ್ಭಗಳಲ್ಲಿ ಬೀದಿಗಿಳಿದು ನೇಮಕಾತಿಗಾಗಿ ಹೋರಾಟ ನಡೆಸಿದ್ದಾರೆ. ಹಾಗಾಗಿ ನಾವು ತಕ್ಷಣ 72,000 ಹುದ್ದೆಗಳ ನೇಮಕಾತಿ ಮಾಡಿಕೊಳ್ಳುತ್ತೇವೆ ಎಂದು ತಿಳಿಸಿದರು.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button