Latest

ಪರಮೇಶ್ವರ ಪಿಎ ಆತ್ಮಹತ್ಯೆ- ಐಟಿ ವಿಚಾರಣೆಗೆ ಹೆದರಿ ನೇಣಿಗೆ ಶರಣು

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು -ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರ ಆಪ್ತ ಸಹಾಯಕ ರಮೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಕಳೆದ ಕೆಲವು ಗಂಟೆಯಿಂದ ರಮೇಶ್ ನಾಪತ್ತೆಯಾಗಿದ್ದರು. ಅವರ ಮೊಬೈಲ್ ಕೂಡ ಸ್ವಿಚ್ಡ್ ಆಫ್ ಆಗಿತ್ತು. ಸ್ನೇಹಿತರಿಗೆ ಕರೆ ಮಾಡಿ ನಂತರ ಮೊಬೈಲ್ ಸ್ವಿಚ್ಡ್ ಆಫ್ ಮಾಡಿದ್ದರು.

Home add -Advt

ರಮೇಶ್ ಮನೆಯ ಮೇಲೂ ಐಟಿ ದಾಳಿ ನಡೆದಿತ್ತು. ಅವರನ್ನು ವಿಚಾರಣೆಗೂ ಒಳಪಡಿಸಲಾಗಿತ್ತು. ಇಂದು ಬೆಳಗ್ಗೆಯಷ್ಟೆ ವಿಚಾರಣೆ ನಡೆಸಿ ಬಿಡಲಾಗಿತ್ತು ಎನ್ನಲಾಗಿದೆ.

ನಾನು ಬಡವ. ನನಗೆ ಐಟಿ ವಿಚಾರಣೆಗೆ ಕರೆಯುತ್ತಾರೆ. ವಿಚಾರಣೆ ಎದುರಿಸಲು ನನ್ನಿಂದ ಸಾಧ್ಯವಿಲ್ಲ. ಭಯವಾಗುತ್ತಿದೆ. ಹಾಗಾಗಿ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಸ್ನೇಹಿತರ ಬಳಿ ಹೇಳಿಕೊಂಡಿದ್ದರು ಎನ್ನಲಾಗುತ್ತಿದೆ.

ರಮೇಶ್ ಕಳೆದ ಕೆಲವು ತಿಂಗಳಿನಿಂದ ಪರಮೇಶ್ವರ ಜೊತೆ ಕೆಲಸ ಮಾಡುತ್ತಿದ್ದರು. ಪರಮೇಶ್ವರ ಮನೆ ಹಾಗೂ ಸಂಸ್ಥೆಗಳ ಮೇಲೆ ಕಳೆದ 3 ದಿನಗಳಿಂದ ಆದಾಯ ತೆರಿಗೆ ದಾಳಿ ನಡೆಯುತ್ತಿರುವುದು ಇಲ್ಲಿ ಉಲ್ಲೇಖನೀಯ.

ಪರಮೇಶ್ವರ ವಿರುದ್ಧ ಇಡಿಯಿಂದಲೂ ತನಿಖೆ

Related Articles

Back to top button