Kannada NewsKarnataka NewsLatestPolitics
*ಎಂಇಎಸ್ ಮುಖಂಡನ ಜೊತೆ ಸೆಲ್ಫಿ ತೆಗೆದುಕೊಂಡ ಪೊಲೀಸ್ ಇನ್ಸ್ ಪೆಕ್ಟರ್ ವಿರುದ್ಧ ಕ್ರಮ: ಗೃಹ ಸಚಿವ ಪರಮೇಶ್ವರ್*

ಪ್ರಗತಿವಾಹಿನಿ ಸುದ್ದಿ: ಕನ್ನಡ ರಾಜ್ಯೋತ್ಸವ ದಿನಾಚರಣೆಯಂದು ಎಂಇಎಸ್ ಮುಖಂಡ ಶುಭಂ ಸೆಳಕೆ ಜೊತೆ ಸೆಲ್ಫಿ ತೆಗೆದುಕೊಂಡ ಬೆಳಗಾವಿ ಪೊಲೀಸ್ ಇನ್ಸ್ ಪೆಕ್ಟರ್ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಸೆಲ್ಫಿ ತೆಗೆದುಕೊಂಡಿದ್ದಾರೆ ಎಂಬ ಮಾತ್ರಕ್ಕೆ ಕನ್ನಡ ವಿರೋಧಿ ಮನಸ್ಥಿತಿ ಹೊಂದಿದ್ದಾರೆ ಎಖ್ಂದು ಭಾವಿಸಬಾರದು. ಕನ್ನಡ ನಾಡಿನ ಬದ್ಧತೆ, ತತ್ವಕ್ಕೆ ವಿರುದ್ಧವಾಗಿ ಹೋಗುವ ಯಾವುದೇ ಅಧಿಕಾರಿ, ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಕನ್ನಡ ನೆಲ, ಜಲ, ಭಾಷೆ ರಕ್ಷಣೆಯಲ್ಲಿ ಯಾವುದೇ ರಾಜಿಯಿಲ್ಲ ಎಂದು ಹೇಳಿದರು.




