Kannada NewsKarnataka NewsLatest

ಬೆಳಗಾವಿ ಗ್ರಾಮೀಣ ಕ್ಷೇತ್ರದ​ ವಿವಿಧೆಡೆ ಲಸಿಕಾ ಅಭಿಯಾನಕ್ಕೆ ಚಾಲನೆ​

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ -​  ಬೆಳಗಾವಿ ಗ್ರಾಮೀಣ  ಕ್ಷೇತ್ರದ ಬೆಂಡಿಗೇರಿ ಮತ್ತು ಗೆಜಪತಿ ಗ್ರಾಮಗಳಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅನುಪಸ್ಥಿತಿಯಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಹರ್ಷ ಶುಗರ್ಸ್ ವ್ಯವಸ್ಥಾಪಕ ನಿರ್ದೇಶಕ ಚನ್ನರಾಜ ಹಟ್ಟಿಹೊಳಿ ಸೇರಿ ಕೋವಿಡ್ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು.
ಹದಿನೆಂಟು ವರ್ಷದ ಮೇಲ್ಪಟ್ಟವರಿಗೆ ಪ್ರಥಮ ಡೋಸ್ ನ ಲಸಿಕೆಯನ್ನು ವಿತರಿಸಲಾಗುತ್ತಿದ್ದು, ನಿಗದಿತ ಸಮಯದಲ್ಲಿ ಎರಡನೇ ಡೋಸ್ ​ನೀಡಲು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಪ್ರತಿಯೊಬ್ಬ​ರೂ​ ಕೋವಿಡ್ ಲಸಿಕೆಗಳ ಬಗ್ಗೆ ಭಯಪಡದೇ ಹೆಚ್ಚಿನ ಪ್ರಮಾಣದಲ್ಲಿ‌ ಲಸಿಕೆಗಳನ್ನು ತೆಗೆದುಕೊಳ್ಳಲು ಮುಂದಾಗಬೇಕು​. ಲಸಿಕೆಗಳಿಂದ ಯಾವುದೇ ಅಡ್ಡ ಪರಿಣಾಮವಿಲ್ಲ​. ಕೋವಿಡ್ ಲಸಿಕೆಗಳು ಮಾನವನ ದೇಹಕ್ಕೆ ಸಹಕಾರಿಯಾಗುವುದರ ಜೊತೆಗೆ ರೋಗ ನಿರೋಧಕ ಶಕ್ತಿಯನ್ನು ವೃದ್ಧಿಸಿ, ಇತರ ರೋಗಗಳಿಂದಲೂ ಸಹ ದೂರವಿಡುತ್ತವೆ​ ಎಂದು ಚನ್ನರಾಜ ಹಟ್ಟಿಹೊಳಿ ಹೇಳಿದರು.
​ ಈ ಸಂದರ್ಭದಲ್ಲಿ ಗ್ರಾಮ​ಸ್ಥರು, ಸ್ಥಳೀಯ ಜನ ಪ್ರತಿನಿಧಿಗಳು, ಆರೋಗ್ಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

 

 

 

Home add -Advt

 

 

 

 

Related Articles

Back to top button