Latest

ಪರೇಶ್ ಮೇಸ್ತ ಸಾವು ಪ್ರಕರಣ; ಬಿಜೆಪಿಯನ್ನು ಕುಟುಕಿದ ಕಾಂಗ್ರೆಸ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪರೇಶ್ ಮೇಸ್ತ ಹತ್ಯೆ ಪ್ರಕರಣ ಇದು ಕೊಲ್ರ್ಯಲ್ಲ ಸಹಜ ಸಾವು ಎಂದು ಸಿಬಿಐ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ ಬೆನ್ನಲ್ಲೇ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಕ್ಸಮರ ಆರಂಭಿಸಿದೆ. ಅಂದಿನ ಕಾಂಗ್ರೆಸ್ ಸರ್ಕಾರದ ವಿರುದ್ಧ ಸುಳ್ಳು ಆರೋಪ ಮಾಡಿದ್ದಕ್ಕೆ ರಾಜ್ಯದ ಜನತೆ ಕ್ಷಮೆಯಾಚಿಸುವಂತೆ ಆಗ್ರಹಿಸಿದೆ.

ಪಾಪಿ ಬಿಜೆಪಿಯ ಸುಳ್ಳುಗಳು ಅವರದ್ದೇ ಆಡಳಿತದಲ್ಲಿರುವ ಸಿಬಿಐನಿಂದ ಬೆತ್ತಲಾಗುತ್ತಲೇ ಇವೆ ಎಂದು ಹೇಳುವ ಮೂಲಕ ಬಿಜೆಪಿ ವಿರುದ್ಧ ಕಿಡಿಕಾರಿದೆ.

ಡಿ.ಕೆ ರವಿ ಪ್ರಕರಣ – ವೈಯುಕ್ತಿಕ ಕಾರಣಗಳಿಗೆ ಆತ್ಮಹತ್ಯೆ ಎಂದು ಸಿಬಿಐ ವರದಿ ನೀಡಿದೆ. ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ – ಸರ್ಕಾರಕ್ಕೆ ಸಂಬಂಧವಿಲ್ಲ ಎಂದು ವರದಿ, ಪರೇಶ್ ಮೇಸ್ತಾ ಪ್ರಕರಣ – ಸಹಜ ಸಾವು ಎಂದು ಸಿಬಿಐ ವರದಿ ಸಲ್ಲಿಸಿದೆ. ಈ ಮೂಲಕ ಅಂದಿನ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಮಾಡಿದ್ದ ಆರೋಪಗಳು ಸುಳ್ಳು ಎಂಬುದು ಗೊತಾಗಿದೆ.

ಸುಳ್ಳು ಹೇಳಿದ್ದ ಬಿಜೆಪಿ ರಾಜ್ಯದ ಕ್ಷಮೆ ಕೇಳಬೇಕು ಎಂದು ಸರಣಿ ಟ್ವೀಟ್ ಮೂಲಕ ಆಗ್ರಹಿಸಿದೆ.

Home add -Advt

ಇನ್ನು ಹೊನ್ನಾವರದ ಪರೇಶ್ ಮೇಸ್ತನದ್ದು ಹತ್ಯೆ ಅಲ್ಲ, ಆಕಸ್ಮಿಕ‌ ಸಾವು ಎಂಬ ಸಿಬಿಐನ ವಿಚಾರಣಾ ವರದಿ ರಾಜ್ಯ ಬಿಜೆಪಿ ಮುಖಕ್ಕೆ ಬಡಿದ ತಪರಾಕಿ. ಬಿಜೆಪಿಗೆ ಮಾನ-ಮರ್ಯಾದೆ ಇದ್ದರೆ ನಮ್ಮ ಮೇಲೆ ಮಾಡಿದ್ದ ಸುಳ್ಳು ಆರೋಪಕ್ಕಾಗಿ ಕ್ಷಮೆ ಕೋರಬೇಕು. ಬಿಜೆಪಿ ಗೆದ್ದಿರುವ ಪ್ರತಿಯೊಂದು ಸ್ಥಾನದ ಹಿಂದೆ ಪರೇಶ್ ಮೇಸ್ತನಂತಹ ಅಮಾಯಕ ಯುವಕರ ರಕ್ತ ಇದೆ. ಬಿಜೆಪಿ ನಾಯಕರೇ, ನೀವು ಅನುಭವಿಸುತ್ತಿರುವ ಅಧಿಕಾರದ ಕುರ್ಚಿಗೆ ಮೇಸ್ತಾನಂತಹ ಯುವಕರ ರಕ್ತದ ಕಲೆ ಅಂಟಿಕೊಂಡಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಈಗಲೂ ಹೇಳುತ್ತೇನೆ ನನ್ನ ಮಗನದ್ದು ಸಹಜ ಸಾವಲ್ಲ, ಕೊಲೆ; ಪರೇಶ್ ಮೇಸ್ತ ತಂದೆ ಕಣ್ಣೀರು

https://pragati.taskdun.com/latest/paresh-mesta-casecbi-b-reportfatherreaction/

Related Articles

Back to top button