
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬರುವ ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್ ಚುನಾವಣೆಯಲ್ಲಿ ಪಕ್ಷ ಎರಡೂ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ನಿಲ್ಲಿಸುವ ನಿರ್ಧಾರ ಮಾಡಿದರೆ ಎರಡೂ ಸ್ಥಾನಗಳನ್ನು ಗೆಲ್ಲುವ ಸಂಪೂರ್ಣ ವಿಶ್ವಾಸ ಪಕ್ಷಕ್ಕಿದೆ. ಈ ಬಗ್ಗೆ ಮುಂದಿನ ನಿರ್ಧಾರ ಬರುವವರಿಗೆ ಕಾಯದೆ ಚುನಾವಣೆಗೆ ವ್ಯವಸ್ಥಿತ ಪೂರ್ವ ತಯಾರಿಯಲ್ಲಿ ಪಕ್ಷದ ನಾಯಕರು, ಜನಪ್ರತಿನಿಧಿಗಳು, ಕಾರ್ಯಕರ್ತರು ಹಾಗೂ ಪದಾಧಿಕಾರಿಗಳು ಇರಬೇಕು ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ ಹೇಳಿದರು.
ನಗರದ ಖಾಸಗಿ ಹೋಟೆಲೂಂದರಲ್ಲಿ ರವಿವಾರ ನಡೆದ ಭಾರತೀಯ ಜನತಾ ಪಾರ್ಟಿ ವಿಧಾನಪರಿಷತ್ ಸದಸ್ಯರ ಚುನಾವಣೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಸಂಸದೆ ಮಂಗಲ ಅಂಗಡಿ ಮಾತನಾಡಿ ಜಿಲ್ಲೆಯಲ್ಲಿ ಬಿಜೆಪಿ ಸಂಘಟನೆ ಬಲಿಷ್ಠವಾಗಿದ್ದು ಕಾರ್ಯಕರ್ತರು ಉತ್ಸಾಹದಿಂದ ಚುನಾವಣೆಯಲ್ಲಿ ಶ್ರಮವಹಿಸುತ್ತಿರುವದರಿಂದ ಪ್ರತಿಯೊಂದು ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದರು.
ವಿಭಾಗ ಪ್ರಭಾರಿ ಚಂದ್ರಶೇಖರ್ ಕವಟಗಿ ಪ್ರಸ್ತಾವಿಕವಾಗಿ ಮಾತನಾಡಿ, ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾಗುವ ವಿಧಾನ ಪರಿಷತ್ ಸದಸ್ಯರ ಚುನಾವಣೆಯಲ್ಲಿ ಪಕ್ಷದ ಮುಖಂಡರು ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರು, ಪದಾಧಿಕಾರಿಗಳು ಕೈಗೊಳ್ಳಬೇಕಾದ ಚುನಾವಣಾ ಕಾರ್ಯಗಳ ಬಗ್ಗೆ ತಿಳಿಸಿದರು.
ವಿಧಾನ ಪರಿಷತ್ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ವಿಧಾನ ಸಭೆಯ ಉಪ ಸಭಾಪತಿ ಆನಂದ ಮಾಮನಿ, ವಿಧಾನ ಪರಿಷತ್ ಸದಸ್ಯರಾದ ಪ್ರದೀಪ ಶೆಟ್ಟರ, ಶಾಸಕರಾದ ಅಭಯ್ ಪಾಟೀಲ್ ಮಹಾಂತೇಶ್ ದೊಡ್ಡಗೌಡರ, ಮಹದೇವಪ್ಪ ಯಾದವಾಡ, ಅನಿಲ್ ಬೆನಕೆ, ದುರ್ಯೋಧನ ಐಹೊಳೆ, ಜಿಲ್ಲಾಧ್ಯಕ್ಷರಾದ ಸಂಜಯ ಪಾಟೀಲ, ಡಾ. ರಾಜೇಶ್ ನೇರ್ಲಿ, ಶಶಿಕಾಂತ ಪಾಟೀಲ, ರಾಜ್ಯ ವಕ್ತಾರ ನ್ಯಾಯವಾದಿ ಎಂಬಿ ಝೀರಲಿ ಮಾತನಾಡಿದರು.
ವೇದಿಕೆಯ ಮೇಲೆ ರಾಜ್ಯದ ಪದಾಧಿಕಾರಿ ಉಜ್ವಲ ಬಡವನಾಚೆ, ವಿಭಾಗದ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಅಕ್ಕಲಕೋಟ, ವಿಭಾಗದ ಸಹ ಪ್ರಭಾರಿ ಬಸವರಾಜ್ ಯಂಕಂಚಿ ಇದ್ದರು.
ಮೂರು ಜಿಲ್ಲೆಗಳ ವ್ಯಾಪ್ತಿಯ ಜಿಲ್ಲಾ ಹಾಗೂ ಮಂಡಲ ಪ್ರಧಾನ ಕಾರ್ಯದರ್ಶಿಗಳು ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.
ಚುನಾವಣಾ ಪೂರ್ವಭಾವಿ ಸಭೆಯಲ್ಲಿ ಮಾಜಿ ಶಾಸಕ ಶಶಿಕಾಂತ ನಾಯಕ, ಕಾಡಾ ಅಧ್ಯಕ್ಷ ಡಾ ವಿ ಆಯ್ ಪಾಟೀಲ್, ರಮೇಶ್ ದೆಶಪಾಂಡೆ, ರಾಜೇಂದ್ರ ಹರಕುಣಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಭಾಷ್ ಪಾಟೀಲ್ ಖಜಾಂಚಿ ಮಲ್ಲಿಕಾರ್ಜುನ್ ಮಾದಮ್ಮನವರ ಮೊದಲಾದವರಿದ್ದರು. ಮಹಾನಗರ ಅಧ್ಯಕ್ಷ ಶಶಿಕಾಂತ್ ಪಾಟೀಲ್ ಸ್ವಾಗತಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ್ ಮೋಹಿತೆ ನಿರೂಪಿಸಿದರು. ಚಿಕ್ಕೋಡಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸತೀಶ್ ಅಪ್ಪಾಜಿಗೊಳ ವಂದಿಸಿದರು.
ಗೌಪ್ಯ ಮಾಹಿತಿ ಸಂಗ್ರಹ
ಈ ಸಭೆಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಗೌಪ್ಯವಾಗಿ ಪ್ರತಿ ಮಂಡಲದಿಂದ ಪದಾಧಿಕಾರಿಗಳ, ಕಾರ್ಯಕರ್ತರ ಹಾಗೂ ಎಲ್ಲ ಜನಪ್ರತಿನಿಧಿಗಳನ್ನು ಪ್ರತ್ಯೇಕವಾಗಿ ಅಭಿಪ್ರಾಯ ಸಂಗ್ರಹಿಸಿ ಟಿಕೆಟ್ ಆಕಾಂಕ್ಷಿತ ಅಭ್ಯರ್ಥಿಗಳ ಬಗ್ಗೆ ಮಾಹಿತಿ ಪಡೆದು ರಾಜ್ಯ ಕೋರ್ ಕಮಿಟಿಗೆ ವರದಿ ಪಡೆದುಕೊಂಡಿದ್ದಾರೆ.
ಬರುವ ಸ್ಥಳೀಯ ಸಂಸ್ಥೆಯ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಇಬ್ಬರು ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ತಯಾರಿ ನಡೆದಿದ್ದು ಅಭ್ಯರ್ಥಿಗಳು ಯಾರಾಗುವರೆಂಬ ಕುತೂಹಲ ಮೂಡಿದೆ, ಆಕಾಂಕ್ಷಿಗಳಲ್ಲಿ ಹೊಸ ಆಸೆ ಚಿಗುರಿದೆ ಎಂದು ಬಿಜೆಪಿ ಮೂಲಗಳು ಹೇಳಿವೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ