Karnataka NewsLatestPolitics

*ರಾಜ್ಯದಲ್ಲಿ ಮತ್ತೆ ಆರಂಭವಾಯ್ತು ರೆಸಾರ್ಟ್ ರಾಜಕಾರಣ: ಕಾಂಗ್ರೆಸ್ ಶಾಸಕರು ನಾಳೆ ರೆಸಾರ್ಟ್ ಗೆ ಶಿಫ್ಟ್*

ಪರಿಷತ್ ಚುನಾವಣೆ: ಅಡ್ಡ ಮತದಾನದ ಭೀತಿ

Home add -Advt


ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ ಶುರುವಾದಂತಿದೆ. ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಅಡ್ಡಮತದಾನದ ಭೀತಿ ಶುರುವಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ತನ್ನ ಎಲ್ಲಾ ಶಾಸಕರನ್ನು ರೆಸಾರ್ಟ್ ಗೆ ಶಿಫ್ಟ್ ಮಾಡಲು ಮುಂದಾಅಗಿದೆ.

ಕಾಂಗ್ರೆಸ್​ನ 14 ಶಾಸಕರಿಗೆ ಜೆಡಿಎಸ್ ಸಂಪರ್ಕ ಮಾಡಿರುವ ಮಾಹಿತಿ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮಕ್ಕೆ ಕಾಂಗ್ರೆಸ್​​ ಬಿಡದಿಯ ವಂಡರ್‌ಲಾ ರೆಸಾರ್ಟ್‌ಗೆ ಶಾಸಕರನ್ನು ಶಿಫ್ಟ್ ಮಾಡಲು ನಿರ್ಧರಿಸಿದೆ. ಅಲ್ಲಿಯೇ ಮತದಾನ ಪ್ರಕ್ರಿಯೆ ಬಗ್ಗೆ ಶಾಸಕರಿಗೆ ವಿವರವಾದ ತರಬೇತಿಯನ್ನೂ ಹಮ್ಮಿಕೊಂಡಿದೆ.

ಈಗಾಗಲೇ ರೆಸಾರ್ಟ್ ನಲ್ಲಿ ಒಟ್ಟು 140 ರೂಂ ಬುಕ್ಕಿಂಗ್ ಆಗಿದೆ. ನಾಳೆ ಹಾಗೂ ನಾಡಿದ್ದು ಕಾಂಗ್ರೆಸ್ ಶಾಸಕರು ಅಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. ಕಾಂಗ್ರೆಸ್​ನ 14 ಶಾಸಕರಿಗೆ ಜೆಡಿಎಸ್ ಸಂಪರ್ಕ ಮಾಡಿದೆ ಎನ್ನಲಾಗಿದೆ. ಪಕ್ಷೇತರ ಶಾಸಕರನ್ನು ಕೂಡ ಹೆಚ್.​ಡಿ.ಕುಮಾರಸ್ವಾಮಿ ಸಂಪರ್ಕ ಮಾಡಿದ್ದಾರೆಂಬ ಅನುಮಾನ ಹಿನ್ನೆಲೆಯಲ್ಲಿ ಶಾಸಕರನ್ನು ಗಟ್ಟಿಯಾಗಿ ಹಿಡಿದಿಟ್ಟುಕೊಳ್ಳಲು ಕಸರತ್ತು ಶುರುವಾಗಿದೆ.

ಜೂ.18ರಂದು ತಂಡ ತಂಡವಾಗಿ ತೆರಳಲಿರುವ ಕಾಂಗ್ರೆಸ್​​ ಶಾಸಕರು, ನೇರವಾಗಿ ವಿಧಾನಸೌಧಕ್ಕೆ ಬಂದು ಮತದಾನ ಮಾಡಲಿದ್ದಾರೆ. ಇನ್ನು ಡಿ.ಕೆ.ಶಿವಕುಮಾರ್​ ಸಿಎಂ ಆದ ಬಳಿಕ ಮೊದಲ ಸಿಎಲ್​ಪಿ ಸಭೆ ನಾಳೆ ಸಂಜೆ 6 ಗಂಟೆಗೆ ಬಿಡದಿಯ ವಂಡರ್​ಲಾ ರೆಸಾರ್ಟ್​ನಲ್ಲಿಯೇ ನಡೆಯಲಿದೆ. ಸಿಎಲ್​ಪಿ ಸಭೆಯಲ್ಲಿ ಮತದಾನ ಪ್ರಕ್ರಿಯೆ ಬಗ್ಗೆ ಶಾಸಕರಿಗೆ ವಿವರವಾದ ತರಬೇತಿ ನಡೆಯಲಿದೆ.

Related Articles

Back to top button