Latest

ಪರಿಷತ್ ಸಭಾಪತಿ ಹೊರಟ್ಟಿ ವಿರುದ್ಧ FIR; ಇನ್ಸ್ ಪೆಕ್ಟರ್ ಸಸ್ಪೆಂಡ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ವಿರುದ್ಧ ಎಫ್ ಐ ಆರ್ ದಾಖಲು ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ ಗ್ರಾಮೀಣ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅವರನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ.

ಧಾರವಾಡದ ಸರ್ವೋದಯ ಶಿಕ್ಷಣ ಸಂಸ್ಥೆ ವಿವಾದಕ್ಕೆ ಸಂಬಂಧಿಸಿದಂತೆ ನಡೆದಿದ್ದ ಗಲಾಟೆಗೆ ಬಸವರಾಜ್ ಹೊರಟ್ಟಿ ಕುಮ್ಮಕ್ಕು ನೀಡಿದ್ದಾರೆ ಎಂದು ಆರೋಪಿಸಿ ಹೊರಟ್ಟಿ ವಿರುದ್ಧ ದೂರು ದಾಖಲಾಗಿತ್ತು. ಗಲಾಟೆಗೆ ಸಂಬಂಧಿಸಿದಂತೆ ಧಾರವಾಣ ಗ್ರಾಮೀಣ ಠಾಣೆಯಲ್ಲಿ ಸಭಾಪತಿ ಹೊರಟ್ತಿವಿರುದ್ಧ ಎಫ್ ಐ ಆರ್ ದಾಖಲಾಗಿತ್ತು.

Home add -Advt

ಪರಿಷತ್ ಸಭಾಪತಿ ವಿರುದ್ಧ ಎಫ್ ಐ ಆರ್ ದಾಖಲು ಪ್ರಕರಣ ವಿಧಾನ ಪರಿಷತ್ ನಲ್ಲಿಯೂ ಪ್ರತಿಧ್ವನಿಸಿತ್ತಲ್ಲದೇ, ಇನ್ಸ್ ಪೆಕ್ಟರ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ ಕೇಳಿಬಂದಿತ್ತು. ಇದೀಗ ಧಾರವಾಡ ಗ್ರಾಮೀಣ ಠಾಣೆ ಇನ್ಸ್ ಪೆಕ್ಟರ್ ಅವರನ್ನು ಅಮಾನತುಗೊಳಿಸಿ ಡಿಜಿಪಿ ಪ್ರವೀಣ್ ಸೂದ್ ಆದೇಶ ಹೊರಡಿಸಿದ್ದಾರೆ.
6 ವರ್ಷಗಳ ಹಿಂದೆ ಕಾಣೆಯಾಗಿದ್ದ ತಾಯಿ-ಮಗನನ್ನು ಒಂದು ಮಾಡಿದ ಆಧಾರ್ ಕಾರ್ಡ್

Related Articles

Back to top button