ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನಕ್ಕೆ ದಿನಾಂಕ ನಿಗಧಿಯಾಗಿದ್ದು, ಸೆಪ್ಟೆಂಬರ್ 14 ರಿಂದ ಅಧಿವೇಶನ ಆರಂಭವಾಗಲಿದೆ ಎಂದು ಕೇಂದ್ರ ಸರ್ಕಾರದ ಉನ್ನತ ಮೂಲಗಳಿಂದ ತಿಳಿದು ಬಂದಿದೆ.
ಕೊರೊನಾ ಸೋಂಕಿನ ಹಿನ್ನಲೆಯಲ್ಲಿ ಈ ಬಾರಿ ಸಂಸತ್ ಅಧಿವೇಶನವೂ ವಿಭಿನ್ನವಾಗಿ ನಡೆಯಲಿದೆ. ಈ ಬಾರಿಯ ಸಂಸತ್ತಿನ ಮುಂಗಾರು ಅಧಿವೇಶನವನ್ನು ದಿನ ಬಿಟ್ಟು ದಿನ ನಡೆಸಲು ನಿರ್ಧರಿಸಲಾಗಿದೆ. ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ದೃಷ್ಟಿಯಿಂದ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರಿಗೆ ಆಸನದ ವ್ಯವಸ್ಥೆಯೂ ಭಿನ್ನವಾಗಿರಲಿದೆ.
ದೇಶಾದ್ಯಂತ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಮುಂಜಾಗೃತಾ ಕ್ರಮಗಳನ್ನು ಕೈಗೊಂಡು ಈ ಬಾರಿ ಯಾವರೀತಿ ಸಂಸತ್ ಅಧಿವೇಶನ ನಡೆಸಬೇಕು ಎಂಬ ಬಗ್ಗೆ ಹಲವಾರು ಚರ್ಚೆ ಗಳು ನಡೆದಿದ್ದವು. ಶಿಫ್ಟ್ ಮಾದರಿಯಲ್ಲಿ ಇಲ್ಲವೇ ಒಂದು ದಿನ ಬಿಟ್ಟು ಒಂದು ದಿನ ಅಧಿವೇಶನ ನಡೆಸುವ ಬಗ್ಗೆ ಚರ್ಚೆಗಳು ನಡೆದಿದ್ದವು. ಅಂತಿಮವಾಗಿ ರಾಜ್ಯಸಭೆ ಸಭಾಪತಿ ಎಂ. ವೆಂಕಯ್ಯನಾಯ್ಡು ಮತ್ತು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಸಂಸತ್ ಸಚಿವಾಲಯದ ಅಧಿಕಾರಿಗಳ ಜೊತೆ ಹಲವು ಸುತ್ತಿನ ಮಾತುಕತೆ ನಡೆಸಿ, ಹಲವು ಸಾಧ್ಯತೆಗಳನ್ನು ಪರಿಶೀಲಿಸಿ ದಿನ ಬಿಟ್ಟು ದಿನ ನಡೆಸಲು ನಿರ್ಧರಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ