National

*ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ*

ಪ್ರಗತಿವಾಹಿನಿ ಸುದ್ದಿ: ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ ಆರಂಭವಾಗಲಿದೆ. ಪಹಲ್ಗಾಮ್ ದಾಳಿ, ಆಪರೇಷನ್ ಸಿಂಧೂರ್, ಡೊನಾಲ್ಡ್ ಟ್ರಂಪ್, ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ಹಲವು ವಿಷಗಳು ಚರ್ಚೆಗೆ ಬರಲಿವೆ.

ಇಂದಿನಿಂದ ಆರಂಭವಾಗಲಿರುವ ಸಂಸತ್ ಮುಂಗಾರು ಅಧಿವೇಶನ ಆಗಸ್ಟ್ 12ಕ್ಕೆ ಪೂರ್ಣಗೊಳ್ಳಲಿದೆ. ಆಗಸ್ಟ್ 18ರಂದು ಸ್ವಾತಂತ್ರ್ಯ ದಿನಾಚರಣೆಗೆ ಸಂಬಂಧಿಸಿದ ಹಲವು ಕಾರ್ಯಕ್ರಮಗಳು ನಡೆಯಲಿವೆ.

ಅಧಿವೇಶನಕ್ಕೆ ಮುನ್ನ ಕರೆಯಲಾಗಿದ್ದ ಸರ್ವಪಕ್ಷಗಳ ಸಭೆಯಲ್ಲಿ ಆಪರೇಷನ್ ಸಿಂಧೂರ್ ಹಾಗೂ ಟ್ರಂಪ್ ಹೇಳಿಕೆಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ದೇಶಕ್ಕೆ ಉತ್ತರ ನೀಡಬೇಕು ಎಂದು ವಿಪಕ್ಷಗಳು ಒತ್ತಾಯಿಸಿವೆ. ಸಂಸತ್ತಿನ ಸುಗಮ ಕಲಾಪಕ್ಕಾಗಿ ಸರ್ಕಾರ ವಿಪಕ್ಷಗಳನ್ನು ಕೋರಿದೆ.

Home add -Advt

Related Articles

Back to top button