EducationLatestNationalPolitics

*ಲೋಕಸಭೆಯಲ್ಲಿ ಪರೀಕ್ಷಾ ತಿದ್ದುಪಡಿ ಮಸೂದೆ-2026 ಮಂಡನೆ*

ಪ್ರಗತಿವಾಹಿನಿ ಸುದ್ದಿ: ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮ ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮುಂದಾಗಿದ್ದು, ಲೋಕಸಭೆಯಲ್ಲಿ ಇಂದು ಪರೀಕ್ಷಾ ತಿದ್ದುಪಡಿ ಮಸೂದೆ-2026ನ್ನು ಮಂಡಿಸಲಾಯಿತು.

ಸಾರ್ವಜನಿಕ ಪರೀಕ್ಷೆಗಳಲ್ಲಿ ಪಾರದರ್ಶಕತೆ ಹಾಗೂ ನಂಬಿಕೆಯನ್ನು ಮರುಸ್ಥಾಪಿಸುವ ಉದ್ದೇಶದಿಂದ ‘ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ತಡೆ) ತಿದ್ದುಪಡಿ ಮಸೂದೆ 2026’ ಅನ್ನು ಕೇಂದ್ರ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರುಲೋಕಸಭೆಯಲ್ಲಿ ಮಂಡಿಸಿದರು.

ನೀಟ್ ಪರೀಕ್ಷಾ ಅಕ್ರಮ ಖಂಡಿಸಿ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಪೊಲೀಸರು ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ನಡೆಸಿದ್ದನ್ನು ಖಂಡಿಸಿ ವಿಪಕ್ಷ ಸದಸ್ಯರು ಲೋಕಸಭೆಯಲ್ಲಿ ಪ್ರತಿಭಟನೆ ನಡೆಸಿ, ಗೃಹ ಸಚಿವ ಅಮಿತ್ ಶಾ ಉತ್ತರ ನೀಡುವಂತೆ ಆಗ್ರಹಿಸಿದರು. ಗೃಹ ಸಚಿವರು ಉತ್ತರಿಸದುದ್ದಾಗ ವಿಪಕ್ಷ ಸದಸ್ಯರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಗದ್ದಲ ಆರಂಭಿಸಿದರು.

ವಿಪಕ್ಷಗಳ ಗದ್ದಲದ ನಡುವೆಯೇ ಸಚಿವ ಜಿತೇಂದ್ರ ಸಿಂಗ್ ಪರೀಕ್ಷಾ ಅಕ್ರಮ ತಡೆ ಮಸೂದೆ ಮಂಡಿಸಿದರು. ಬಳಿಕ ಮಸೂದೆ ಬಗ್ಗೆ ಚರ್ಚೆಗೆ ಮಧ್ಯಾಹ್ನ 2 ಗಂಟೆಗೆ ಕಲಾಪ ನಿಗದಿಗೊಳಿಸಿ ಕಲಾಪವನ್ನು ಸ್ಪೀಕರ್ ಓಂ ಬಿರ್ಲಾ ಮುಂದೂಡಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button