ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಲೋಕಸಭೆಯಲ್ಲಿ ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೆಘ್ವಾಲ್ ಅವರು ಮಹಿಳಾ ಮೀಸಲಾತಿ ಮಸೂದೆ ಮಂಡಿಸಿದ್ದಾರೆ.
ನೂತನ ಸಂಸತ್ ಭವನದಲ್ಲಿ ವಿಶೇಷ ಅಧಿವೇಶನ ಆರಂಭವಾಗಿದ್ದು, ಲೋಕಸಭೆಯಲ್ಲಿ ನಾರಿ ಶಕ್ತಿ ವಂದನ್ ಅಧಿನಿಯಮ್ ಅಡಿ ಮಹಿಳಾ ಮೀಸಲಾತಿ ಮಸೂದೆ ಮಂಡಿಸಲಾಯಿತು.
ಈ ಮೂಲಕ ಇನ್ನು ಮುಂದೆ ಸಂಸತ್, ರಾಜ್ಯಸಭೆ, ಲೋಕಸಭೆ, ವಿಧನಸಭೆಯಲ್ಲಿ ಮಹಿಳೆಯರಿಗೆ ಶೇ.33 ಮೀಸಲಾತಿ ಕಲ್ಪಿಸಲಾಗುತ್ತಿದೆ. ಕೇಂದ್ರ ಸಚಿವರು ಮಸೂದೆ ಮಂಡಿಸುತ್ತಿದ್ದಂತೆ ಕಾಂಗ್ರೆಸ್ ನ ಅಧೀರ್ ರಂಜನ್ ಚೌಧರಿ ಮಸೂದೆ ಇತಿಹಾಸದ ಬಗ್ಗೆ ಪ್ರಶ್ನಿಸಿದರು ಈ ವೇಳೆ ಕಲಾಪದಲ್ಲಿ ಗದ್ದಲ ನ್ಡೆದ ಪ್ರಸಂಗವೂ ನಡೆಯಿತು.
ದೇಶದ ಅಭಿವೃದ್ಧಿ ಪ್ರಕ್ರಿಯೆಯಲ್ಲಿ ಹೆಚು ಹೆಚ್ಚು ಮಹಿಳೆಯರು ಸೇರಬೇಕು ಎಂಬುದು ಕೇಂದ್ರ ಸರ್ಕಾರದ ಉದ್ದೇಶ. ಕ್ರೀಡೆಯಿಂದ ಹಿಡಿದು, ಸ್ಟಾರ್ಟಪ್ ವರೆಗೂ ಜೀವನದ ವಿವಿಧ ಆಯಾಮಗಳಲ್ಲಿ ಮಹಿಳೆಯರ ಕೊಡುಗೆ ಅಪಾರ ದೇಶದಲ್ಲಿ ಮಹಿಳಾ ನೇತೃತ್ವದ ಅಭಿವೃದ್ಧಿ ಪ್ರಕ್ರಿಯೆಯನ್ನು ಜಗತ್ತು ಗುರಿತಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ನಿನ್ನೆ ಹೇಳಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ