National

*ಸಂಸತ್ ಚಳಿಗಾಲದ ಅಧಿವೇಶನ ಆರಂಭ*

ಸುಗಮ ಕಲಾಪಕ್ಕೆ ವಿಪಕ್ಷಗಳಿಗೆ ಪ್ರಧಾನಿ ಮೋದಿ ಮನವಿ


ಪ್ರಗತಿವಾಹಿನಿ ಸುದ್ದಿ:
ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ ಆರಂಭವಾಗಿದೆ. ಇಂದಿನಿಂದ ಡಿಸೆಂಬರ್ 20ರವರೆಗೆ ಸಂಸತ್ ಅಧಿವೇಶನ ನಡೆಯಲಿದ್ದು, ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯಲು ವಿಪಕ್ಷಗಳು ಸಾಕಷ್ಟು ವಿಷಯಗಒಂದಿಗೆ ಸಜ್ಜಾಗಿದ್ದಾರೆ. ಇನ್ನು ಆಡಳಿತರೀಢ ಎನ್ ಡಿಎ ಕೂಡ ವಿಪಕ್ಷಗಳಿಗೆ ತಕ್ಕ ಉತ್ತರ ನೀಡಲು ಸಿದ್ಧವಾಗಿದೆ.

ಸಂಸತ್ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಮೊದಲಿಗೆ ಉಭಯ ಸದನಗಳಲ್ಲಿ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಯಿತು.

Home add -Advt

ಅಧಿವೇಶನ ಆರಂಭಕ್ಕೂ ಮುನ್ನ ಸಂಸತ್ ಭವನದ ಬಳಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, 75ನೇ ವರ್ಷದ ಸಂವಿಧಾನ ದಿನಾಚರಣೆಯ ಸಂದರ್ಭದಲ್ಲಿ ಅಧಿವೇಶನ ನಡೆಯುತ್ತಿದೆ. ಸುಗಮ ಕಲಾಪಕ್ಕೆ ಅವಕಾಶ ಕೊಡಬೇಕು ಎಂದು ವಿಪಕ್ಷಗಳಿಗೆ ಮನವಿ ಮಾಡಿದ್ದಾರೆ.

ಎಲ್ಲಾ ವಿಚಾರಗಳ ಕುರಿತು ಚರ್ಚೆಗೆ ಅವಕಾಶ ಕೊಡುತ್ತೇವೆ. ಜನರ ಸಮಸ್ಯೆಗಳ ಬಗ್ಗೆ ಪ್ರಾಮಾಣಿಕವಾಗಿ ಚರ್ಚೆ ನಡೆಯಬೇಕಿದೆ. ಕಾಂಗ್ರೆಸ್ ಎಣ್ದಿಗೂ ಜನರ ಸಮಸ್ಯೆಗಳ ಬಗ್ಗೆ ಮಾತನಾಡುವುದು ಕಡಿಮೆ. ಬರಿ ಅಧಿಕರದ ದಾಹ ಇರುವವರ ಪಕ್ಷಗಳನ್ನು ಜನ ತಿರಸ್ಕರಿಸಿದ್ದಾರೆ ಎಂದರು.

ದೇಶದ ಜನ ಎಲ್ಲವನ್ನೂ ಅರ್ಥ ಮಾಡಿಕೊಂಡಿದ್ದಾರೆ. ವಿಪಕ್ಷಗಳಿಂದ ಕಲಾಪದ ಸಮಯ ಹಾಳುಮಾಡುವ ಕೆಲಸ ಆಗುತ್ತಿದೆ. ಜನರ ನಿರೀಕ್ಷೆಯಂತೆ ವಿಪಕ್ಷಗಳು ನಡೆದುಕೊಳ್ಳುತ್ತಿಲ್ಲ ಎಂದು ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button