Belagavi NewsBelgaum NewsKannada NewsKarnataka NewsLatestNationalPolitics

*ಯಮಕನಮರ್ಡಿ ರಾಷ್ಟ್ರೀಯ ಹೆದ್ದಾರಿ ಬಳಿ ಹೊತ್ತಿ ಉರಿದ ಕಾರು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ನಿಂತ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕಾರು ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ.

ಹುಕ್ಕೇರಿ ತಾಲೂಕಿನ ಯಮಕನಮರ್ಡಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ನಿಲ್ಲಿಸಿದ್ದ ಕಾರಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ, ಹೊತ್ತಿ ಉರಿದಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸಿ, ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.

ಅದೃಷ್ಟವಶಾತ್ ಅಗ್ನಿ ಅನಾಹುತದಿಂದ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಈ ಕುರಿತು ಯಮಕನಮರ್ಡಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button