Latest

ಸೇನೆಯ ಜತೆ ದೇಶವಿದೆ ಎಂಬ ಸಂದೇಶ ರವಾನಿಸಬೇಕಿದೆ: ಪ್ರಧಾನಿ ಮೋದಿ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ ಆರಂಭವಾಗಿದ್ದು, ಕೊರೊನಾ ನಡುವೆ ಕರ್ತವ್ಯ ನಿರ್ವಹಿಸಬೇಕಾದ ಸ್ಥಿತಿಯಲ್ಲಿ ನಾವಿದ್ದೇವೆ. ಗಡಿಯಲ್ಲಿ ಚೀನಾ ವಿರುದ್ಧ ಹೋರಾಡುತ್ತಿರುವ ಸೈನಿಕರಿಗಾಗಿ ಎಲ್ಲಾ ಸಂಸದರು ಒಗ್ಗಟ್ಟು ಪ್ರದರ್ಶಿಸಬೇಕಿದೆ ಎಂದು ಪ್ರಧಾನಿ ಮೋದಿ ಕರೆ ನೀಡಿದ್ದಾರೆ.

ಸಂಸತ್ ಅಧಿವೇಶನಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಧಾನಿ ಮೋದಿ, ನಮ್ಮ ಸಂಸದರು ಇಂತಹ ಕಠಿಣ ಪರಿಸ್ಥಿತಿಯಲ್ಲೂ ಕರ್ತವ್ಯವನ್ನ ಆಯ್ಕೆ ಮಾಡಿಕೊಂಡಿದ್ದಕ್ಕೆ ಧನ್ಯವಾದ ಹೇಳುತ್ತೇನೆ ಎಂದರು.

ಗಡಿಯಲ್ಲಿ ಹೋರಾಡುತ್ತಿರುವ ಸೈನಿಕರ ಜತೆ ಇಡೀ ದೇಶವಿದೆ ಎಂಬ ಸಂದೇಶವನ್ನು ನಾವು ಅಧಿವೇಶನದ ಮೂಲಕ ರವಾನಿಸಬೇಕಿದೆ. ಅಧಿವೇಶನದಲ್ಲಿ ಹಲವು ವಿಷಯಗಳ ಬಗ್ಗೆ ಗಹನವಾದ ಚರ್ಚೆಗಳು ನಡೆಯಲಿವೆ. ಎಷ್ಟು ಆಳವಾದ ಚರ್ಚೆಗಳು ನಡೆಯುತ್ತೋ ಅಷ್ಟು ಸದನ ಮತ್ತು ದೇಶಕ್ಕೆ ಲಾಭದಾಯವಾಗಲಿದೆ. ಕೊರೊನಾ ವೈರಸ್ ಹಿನ್ನೆಲೆ ಸದನಗಳಲ್ಲಿ ಹಲವು ನಿಯಮಗಳನ್ನ ರೂಪಿಸಲಾಗಿದ್ದು, ಎಲ್ಲರೂ ಪಾಲಿಸಬೇಕು ಎಂದು ತಿಳಿಸಿದರು.

ಕೊರೊನಾಗೆ ಲಸಿಕೆ ಸಿಗೋವರೆಗೂ ನಿರ್ಲಕ್ಷ್ಯ ಬೇಡ. ನಮ್ಮ ವಿಜ್ಞಾನಿಗಳು ಲಸಿಕೆ ಕಂಡುಹಿಡಿಯುವಲ್ಲಿ ಆದಷ್ಟು ಬೇಗ ಸಫಲರಾಗಬೇಕಿದೆ. ವಿಶ್ವದ ಯಾವುದೇ ಭಾಗದಲ್ಲಿ ಔಷಧಿ ಸಿದ್ಧವಾದರೂ ಅದು ಸಂತಸದ ವಿಚಾರ ಎಂದು ಹೇಳಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button