Latest

ರಥೋತ್ಸವದಲ್ಲಿ ಅವಘಡ; ರಥದ ಚಕ್ರಕ್ಕೆ ಸಿಲುಕಿ ಭಕ್ತ ದುರ್ಮರಣ

ಪ್ರಗತಿವಾಹಿನಿ ಸುದ್ದಿ; ಚಾಮರಾಜನಗರ: ಪಾರ್ವತಿ ಬೆಟ್ಟದಲ್ಲಿ ನಡೆದಿದ್ದ ಪಾರ್ವತಾಂಭ ರಥೋತ್ಸವದ ವೇಳೆ ದುರಂತವೊಂದು ಸಂಭವಿಸಿದ್ದು, ರಥದ ಚಕ್ರಕ್ಕೆ ಸಿಲುಕಿ ಭಕ್ತರೊಬ್ಬರು ಸಾವನ್ನಪ್ಪಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆಯ ಪಾರ್ವತಿ ಬೆಟ್ಟದಲ್ಲಿ ನಡೆದಿದೆ.

24 ವರ್ಷದ ಸರ್ಪಭೂಷಣ ಮೃತ ವ್ಯಕ್ತಿ. ಘಟನೆಯಲ್ಲಿ ಮಹಾದೇವಣ್ಣ ಎನ್ನುವವರು ಗಂಭೀರವಾಗಿ ಗಾಯಗೊಂಡಿದ್ದು, ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೋವಿಡ್ ಕಾರಣದಿಂದ ಕಳೆದ ಎರಡು ವರ್ಷಗಳಿಂದ ಪಾರ್ವತಾಂಭ ರಥೋತ್ಸವ ನಡೆದಿರಲಿಲ್ಲ. ಈ ಬಾರಿ ರಥೋತ್ಸವ ನಡೆದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿದ್ದರು. ಈ ವೇಳೆ ನೂಕು ನುಗ್ಗಲು ಉಂಟಾಗಿ ದುರಂತ ಸಂಭವಿಸಿದೆ.
ರಸ್ತೆ ಅಪಘಾತ; ಸ್ಯಾಂಡಲ್ ವುಡ್ ಖ್ಯಾತ ನಿರ್ಮಾಪಕ ದುರ್ಮರಣ

Home add -Advt

Related Articles

Back to top button