National

*ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 6 ಜನರ ಮೃತದೇಹ ಪತ್ತೆ

ಪ್ರಗತಿವಾಹಿನಿ ಸುದ್ದಿ: ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, ದುರಂತದಲ್ಲಿ 6 ಜನರು ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ವಿರುದುನಗರ ಜಿಲ್ಲೆಯ ಸತ್ತೂರು ಪ್ರದೇಶದಲ್ಲಿ ನಡೆದಿದೆ.

ಘಟನಾ ಸ್ಥಳದಲ್ಲಿ ಈವರೆಗೆ 6 ಮೃತದೇಹಗಳು ಪತ್ತೆಯಾಗಿದ್ದು, ಇನ್ನೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

ಸ್ಫೋಟಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಪರವಾನಗಿ ಹೊಂದಿದ್ದ ಪಟಾಕಿ ಕಾರ್ಖಾನೆಯಲ್ಲಿಯೇ ಈ ದುರಂತ ಸಂಭವಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button