*ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ; 9 ಜನರು ಸಜೀವ ದಹನ*

ಪ್ರಗತಿವಾಹಿನಿ ಸುದ್ದಿ: ಮತ್ತೊಂದು ಪಟಾಕಿ ಕಾರ್ಖಾನೆಯಲ್ಲಿ ದುರಂತ ಸಂಭವಿಸಿದ್ದು, 9 ಜನರು ಸಜೀವದಹನವಾಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ತಮಿಳುನಾಡಿನ ವಿರುದುನಗರದಲ್ಲಿರುವ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆ ಇಡೀ ಪಟಾಕಿ ತಯಾರಿಕಾ ಕಾರ್ಖಾನೆಗೆ ವ್ಯಾಪಿಸಿದ್ದು, ಪಟಾಕಿಗಳು ನಿರಂತರವಾಗಿ ಸ್ಫೋಟಗೊಳ್ಳುತ್ತಿವೆ. ಬೆಂಕಿಯನ್ನು ನಂದಿಸಲು ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. *ನೇಣುಬಿಗಿದ ಸ್ಥಿತಿಯಲ್ಲಿ ಮಹಿಳಾ ಕಾನ್ಸ್ ಟೇಬಲ್ ಶವ ಪತ್ತೆ*