Latest

ರಸ್ತೆ ಗುಂಡಿಗೆ ಮತ್ತೊಂದು ಬಲಿ; ಅಪಘಾತಕ್ಕೀಡಾಗಿದ್ದ ಮಹಿಳೆ ಸಾವು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ರಸ್ತೆ ಗುಂಡಿಗೆ ಮತ್ತೊಂದು ಬಲಿಯಾಗಿದೆ. ರಸ್ತೆ ಗುಂಡಿ ತಪ್ಪಿಸಲು ಹೋಗಿ ಬಸ್ ಅಡಿ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

ಉಮಾದೇವಿ ಮೃತ ಮಹಿಳೆ. ನಿನ್ನೆ ಬೆಂಗಳೂರಿನ ಮಾಗಡಿ ರಸ್ತೆಯ ಸುಜಾತಾ ಥಿಯೇಟರ್ ಬಳಿ ಬೈಕ್ ನಲ್ಲಿ ತೆರಳುತ್ತಿದ್ದ ಉಮಾದೇವಿ ರಸ್ತೆ ಗುಂಡಿ ತಪ್ಪಿಸಲು ಹೋಗಿ ಕೆಳಗೆ ಬಿದ್ದಿದ್ದಾರೆ. ಹಿಂದಿನಿಂದ ಬಂದ ಕೆ ಎಸ್ ಆರ್ ಟಿಸಿ ಬಸ್ ಅವರ ಮೇಲೆಯೇ ಹರಿದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಉಮಾದೇವಿ ಅವರನ್ನು ಇಎಸ್ ಐ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಹಿಳೆ ಮೃತಪಟ್ಟಿದ್ದಾರೆ. ಈ ನಡುವೆ ಕೆ ಎಸ್ ಆರ್ ಟಿಸಿ ಬಸ್ ಚಾಲಕ ಮಾರುತಿ ರಾವ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ರಸ್ತೆ ಗುಂಡಿ ಮುಚ್ಚದ ಸರ್ಕಾರ ಹಾಗೂ ಬಿಬಿಎಂಪಿ ವಿರುದ್ಧ ಸಾರ್ವಜನಿಕರು, ಆಮ್ ಆದ್ಮಿ ಪಕ್ಷ ಪ್ರತಿಭಟನೆ ತೀವ್ರಗೊಳಿಸಿವೆ.

ಶಾಸಕ ರೇಣುಕಾಚಾರ್ಯ ಆಪ್ತಸಹಾಯಕನ ಮೇಲೆ ದುಷ್ಕರ್ಮಿಗಳ ದಾಳಿ

https://pragati.taskdun.com/latest/renukacharyapaattackdavanagere/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button