
ಪ್ರಗತಿವಾಹಿನಿ ಸುದ್ದಿ: ಪಟಾಕಿ ಕಾರ್ಖಾನೆಯಲ್ಲಿ ಭೀರಕ ಸ್ಫೋಟ ಸಂಭವಿಸಿ ಸಾವನ್ನಪ್ಪಿದವರ ಸಂಖ್ಯೆ ಕ್ಷಣ ಕ್ಷಣಕ್ಕೂ ಏರಿಕೆಯಾಗುತ್ತಿದೆ. ಪಟಾಕಿ ದುರಂತದಲ್ಲಿ ಈವರೆಗೆ 11 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಮಧ್ಯಪ್ರದೇಶದ ಹರ್ದಾದಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ ಈ ದುರಂತ ಸಂಭವಿಸಿದೆ. 20ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಫೋಟದ ಭೀಕರತೆಗೆ ಸುತ್ತಮುತ್ತಲ ಪ್ರದೇಶದಲ್ಲಿದ್ದ 50ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿವೆ. ಘಟನಾ ಸ್ಥಳಕ್ಕೆ ಧಾವಿಸಿರುವ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ನಿರತವಾಗಿದ್ದು, ಕಾರ್ಖಾನೆಯಲ್ಲಿ ಸಿಲುಕಿದವರನ್ನು ರಕ್ಷಿಸುವ ಕಾರ್ಯಾಚರಣೆ ನಡೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ