ಹುಟ್ಟೂರು ಹಾವೇರಿಯಲ್ಲಿ ಪಾಟೀಲ್ ಪುಟ್ಟಪ್ಪ ಅಂತ್ಯಕ್ರಿಯೆ

ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ಅನಾರೋಗ್ಯದಿಂದ ನಿಧನ ಹೊಂದಿರುವ ನಾಡೋಜ ಪಾಟೀಲ ಪುಟ್ಟಪ್ಪ ಅವರ ಅಂತ್ಯಕ್ರಿಯೆ ಇಂದು ಹಾವೇರಿ‌ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಹಲಗೇರಿಯಲ್ಲಿ ನಡೆಯಲಿದೆ.

ಕಡಿಮೆ ರಕ್ತದೊತ್ತಡ, ರಕ್ತಹೀನತೆ, ಬ್ರೇನ್ ಹೆಮರೈಜ್, ಶ್ವಾಸಕೋಶದ ಸೋಂಕು ಸೇರಿದಂತೆ ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ಪಾಟೀಲ ಪುಟ್ಟಪ್ಪ ಅವರಿಗೆ ಕಿಮ್ಸ್ ನಲ್ಲಿ ಕಳೆದ ಒಂದು ತಿಂಗಳಿಂದ ಚಿಕಿತ್ಸೆ ನೀಡಲಾಗುತ್ತಿತ್ತು. ಶಸ್ತ್ರಚಿಕಿತ್ಸೆ ನಂತರ ಚೇತರಿಸಿಕೊಂಡಿದ್ದ ಅವರಿಗೆ ಶ್ವಾಸಕೋಶದ ಸೋಂಕು ತಗುಲಿತ್ತು.‌ ಹಲವು ದಿನಗಳ ಚಿಕಿತ್ಸೆಯ ನಂತರ ಪಾಪು ನಿನ್ನೆ ರಾತ್ರಿ ಕೊನೆಯುಸಿರೆಳೆದಿದ್ದರು.

ಪಾಟೀಲ್ ಪುಟ್ಟಪ್ಪ ಅವರ ಹುಬ್ಬಳ್ಳಿಯ ನಿವಾಸದಲ್ಲಿ ಅವರ ಪಾರ್ಥವ ಶರೀರವನ್ನು ಬೆಳಿಗ್ಗೆ 9 ರಿಂದ 12 ವರೆಗೆ ಸಾರ್ವಜನಿಕರ ದರ್ಶನಕ್ಕೆ ಇಡಲಾಗಿದ್ದು, ಮಧ್ಯಾಹ್ನ 12 ಗಂಟೆಯಿಂದ ಅರ್ಧಗಂಟೆ ಕಾಲ ಧಾರವಾಡ ಕರ್ನಾಟಕದ ವಿದ್ಯಾವರ್ಧಕ ಸಂಘದಲ್ಲಿ ಜನರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ.

ಬಳಿಕ ಹಾವೇರಿಯ ರಾಣೇಬೆನ್ನೂರು ತಾಲೂಕಿನ ಸ್ವಗ್ರಾಮ ಹಲಗೇರಿಯಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲಾಗುವುದು ಎಂದು ಪಾಟೀಲ ಪುಟ್ಟಪ್ಪ ಅವರ ಪುತ್ರ ಅಶೋಕ ಪಾಟೀಲ ಮಾಹಿತಿ ನೀಡಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button