ಪ್ರಗತಿವಾಹಿನಿ ಸುದ್ದಿ; ಪಾಟ್ನಾ: ಪಾಟ್ನಾ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಅಪರಾಧಿಗಳಿಗೆ ಶಿಕ್ಷೆ ಪ್ರಮಾಣ ಪ್ರಕಟಿಸಿರುವ ಸ್ಥಳೀಯ ನಾಯಾಲಯ ನಾಲ್ವರು ಅಪರಾಧಿಗಳಿಗೆ ಗಲ್ಲುಶಿಕ್ಷೆ ಹಾಗೂ ಇಬ್ಬರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ.
2013ರಲ್ಲಿ ಲೋಕಸಭಾ ಚುನಾವಣೆ ಪ್ರಚಾರಕ್ಕೆಂದು ನರೇಂದ್ರ ಮೋದಿ ಪಾಟ್ನಾಗೆ ತೆರಳಿದ್ದ ವೇಳೆ ಗಾಂಧಿ ಮೈದಾನದಲ್ಲಿ ಸರಣಿ ಬಾಂಬ್ ಸ್ಫೋಟ ನಡೆದಿತ್ತು. ಈ ವೇಳೆ 6 ಜನರು ಕಾಲ್ತುಳಿತದಲ್ಲಿ ಸಾವನ್ನಪ್ಪಿದ್ದರು. 90ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದರು. ಈ ಪ್ರಕರಣದ 10 ಆರೋಪಿಗಳ ಪೈಕಿ 9 ಆರೋಪಿಗಳನ್ನು ದೋಶಿಗಳೆಂದು ತೀರ್ಪು ನೀಡಿದ್ದ ನ್ಯಾಯಾಲಯ ಶಿಕ್ಷೆ ಪ್ರಮಾಣ ಇಂದಿಗೆ ಕಾಯ್ದಿರಿಸಿತ್ತು.
ಇದೀಗ 9 ಆರೋಪಿಗಳಲ್ಲಿ 4 ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿರುವ ನ್ಯಾಯಾಲಯ, ಇಬ್ಬರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ, ಇನ್ನಿಬ್ಬರಿಗೆ 10 ವರ್ಷ ಜೈಲು ಶಿಕ್ಷೆ ಹಾಗೂ ಇನ್ನೋರ್ವನಿಗೆ 7 ವರ್ಷ ಜೈಲು ಶಿಕ್ಷೆ ಪ್ರಕಟಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ