Kannada NewsLatestNational
*ವಾಹನ ತಪಾಸಣೆ ವೇಳೆ ಡಿಕ್ಕಿ ಹೊಡೆದ ಕಾರು: ಓರ್ವ ಮಹಿಳಾ ಪೊಲೀಸ್ ಕಾನ್ಸ್ ಟೇಬಲ್ ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳಾ ಕಾನ್ಸ್ ಟೇಬಲ್ ಸ್ಥಳದಲ್ಲೇ ಸಾವನ್ನಪ್ಪಿದ್ದು ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ನಡೆದಿದೆ.
ಬಿಹಾರದ ಪಾಟ್ನಾದ ಅಟಲ್ ಪಥ್ ನಲ್ಲಿ ಈ ದುರಂತ ಸಂಭವಿಸಿದೆ. ಗಸ್ತಿನಲ್ಲಿದ್ದ ಪೊಲೀಸರ ತಂಡ ವಾಹನಗಳ ತಪಾಸಣೆ ನಡೆಸುತ್ತಿತ್ತು. ಈ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ಮಹಿಳಾ ಕಾನ್ಸ್ ತೆಬಲ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ.
ಅಪಘಾತದ ಬಳಿಕ ಸ್ಕಾರ್ಪಿಯೋ ವಾಹನ ಚಾಲಕ ಎಸ್ಕೇಪ್ ಆಗಿದ್ದಾನೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




