LatestNational

*ಹೋಟೆಲ್ ನಲ್ಲಿ ಬೆಂಕಿ ದುರಂತ; 6 ಜನರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಹೋಟೆಲ್ ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿ 6 ಜನ ಸಜೀವದಹನಗೊಂಡಿರುವ ಘಟನೆ ಬಿಹಾರ ರಾಜಧಾನಿ ಪಾಟ್ನಾದಲ್ಲಿ ನಡೆದಿದೆ.

ಪಾಟ್ನಾ ರೈಲ್ವೆ ನಿಲ್ದಾಣ ರಸ್ತೆಯಲ್ಲಿರುವ ಹೋಟೆಲ್ ನಲ್ಲಿ ಈ ದಿರಂತ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆಗೆ ಹೋಟೆಲ್ ಧಗಧಗನೆ ಹೊತ್ತಿ ಉರಿದಿದೆ. 6 ಜನರು ಮೃತಪಟ್ಟಿದ್ದು, 15 ಜನರು ಗಾಯಗೊಂಡಿದ್ದಾರೆ.

ತಕ್ಷಣ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಗೃಹ ರಕ್ಷಕ ದಳ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿವೆ. 20ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ. ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button