Film & Entertainment

*ನಟಿ ಪವಿತ್ರಾ ಗೌಡ ಪೊಲೀಸ್ ವಶಕ್ಕೆ*

ಪ್ರಗತಿವಾಹಿನಿ ಸುದ್ದಿ: ರೇಣುಕಾಸ್ವಾಮಿ ಎಂಬಾತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ 10 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ನಟಿ ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್, ಫೋಟೊ ಕಳುಹಿಸಿದ್ದ ಆರೋಪದಲ್ಲಿ ರೇಣುಕಾಸ್ವಾಮಿ ಎಂಬಾತನನ್ನು ಕಿಡ್ನ್ಯಾಪ್ ಮಾಡಿ ಕೊಲೆ ಮಡಲಾಗಿತ್ತು. ಹತ್ಯೆ ಬಳಿಕ ಶವವನ್ನು ಕಾಮಾಕ್ಷಿಪಾಳ್ಯದ ಮೋರಿಗೆ ಎಸೆಯಲಾಗಿತ್ತು. ಮೃತದೇಹವನ್ನು ನಾಯಿಗಳು ಎಳೆಯುತ್ತಿದ್ದಾಗ ಜೂನ್ 9ರಂದು ಬೆಳಿಗ್ಗೆ ಸಾರ್ವಜನಿಕರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ನಟ ದರ್ಶನ್ ಸೇರಿ 10 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ನಟಿ ಪವಿತ್ರಾ ಗೌಡಳನ್ನು ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button