Latest

*ಪೊಲೀಸ್ ಠಾಣೆಯಲ್ಲಿ ಪವಿತ್ರಾಗೌಡ ಅಸ್ವಸ್ಥ; ಆಸ್ಪತ್ರೆಗೆ ದಾಖಲು*

ಪ್ರಗತಿವಾಹಿನಿ ಸುದ್ದಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಗೆಳತಿ ಪವಿತ್ರಾ ಗೌಡಗೆ ಪೊಲಿಸ್ ಠಾಣೆಯಲ್ಲಿಯೇ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Home add -Advt

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್ ನ್ನು ಬಂಧಿಸಲಾಗಿದ್ದು, ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ವಿಚಾರಣೆ ಎದುರಿಸುತ್ತಿದ್ದಾರೆ. ನಟ ದರ್ಶನ್ ಹಾಗೂ ಗ್ಯಾಂಗ್ ನಲ್ಲಿ ಇರುವ ಏಕೈಕ ಮಹಿಳೆ ಪವಿತ್ರಾ ಗೌಡ. ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಮಾಡಿದ ಆರೋಪದಲ್ಲಿಯೇ ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಶೆಡ್ ನಲ್ಲಿ ಕೂಡಿ ಹಾಕಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಪವಿತ್ರಾ ಗೌಡ ಎ1 ಆರೋಪಿಯಾಗಿದ್ದು, ವಿಚಾರಣೆ ಎದಿರಿಸುತ್ತಿದ್ದಾರೆ.

ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿರುವ ಪವಿತ್ರಾ ಗೌಡಗೆ ಇದೀಗ ಇದ್ದಕ್ಕಿದ್ದಂತೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದ್ದು, ಪೊಲೀಸರ ಜೀಪ್ ನಲ್ಲಿಯೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.


Related Articles

Back to top button