Kannada NewsKarnataka NewsLatestPolitics
*ಉಡುಪಿಗೆ ಆಗಮಿಸಿದ ಪವನ್ ಕಲ್ಯಾಣ್: ಲಕ್ಷ ಕಂಠ ಗೀತೋತ್ಸವ ಸಮಾರೋಪದಲ್ಲಿ ಭಾಗಿ*

ಪ್ರಗತಿವಾಹಿನಿ ಸುದ್ದಿ: ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಶ್ರೀಕೃಷ್ಣನ ಊರು ಉಡುಪಿಗೆ ಆಗಮಿಸಿದ್ದು, ಲಕ್ಷಕಂಠ ಗೀತಾ ಪಾರಾಯಣ ಸಮಾರೋಪ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ಪವನ್ ಕಲ್ಯಾಣ್ ಕನಕನ ಕಿಂಡಿ ಮೂಲಕ ಶ್ರೀಕೃಷ್ಣನ ದರ್ಶನ ಪಡೆದರು. ಬಳಿಕ ಮದ್ವ ಸರೋವರದಲ್ಲಿ ತೀರ್ಥ ಪ್ರೋಕ್ಷಿಣೆ ಬಳಿಕ ಪ್ರಸಾದ ಸ್ವೀಕರಿಸಿದರು.
ಬಳಿಕ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಪುತ್ತಿಗೆ ಮಠ ಆಯೋಜಿಸಿದ್ದ ಲಕ್ಷಕಂಠ ಗೀತಾ ಪಾರಾಯಣ ಸಮಾರೋಪ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ವೇಳೆ ಕನ್ನಡದಲ್ಲಿಯೇ ಭಾಷಣವನ್ನು ಆರಂಭಿಸಿದ್ದು ವಿಶೇಷವಾಗಿತ್ತು.


