ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಪೇ ಸಿಎಂ ಅಭಿಯಾನ ರಾಜ್ಯ ಮತ್ತು ನನ್ನ ಹೆಸರು ಕೆಡಿಸಲು ನಡೆಸಿರುವ ಷಡ್ಯಂತ್ರ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ಕಾಂಗ್ರೆಸ್ ಪಕ್ಷ ಪೇ ಸಿಎಂ ಅಭಿಯಾನ ಕೈಗೊಂಡಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಇದು ವ್ಯವಸ್ಥಿತವಾಗಿ ಕರ್ನಾಟಕ ರಾಜ್ಯ ಮತ್ತು ನನ್ನ ಹೆಸರು ಕೆಡಿಸಲು ಷಡ್ಯಂತ್ರ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಪ್ರಕರಣ ದಾಖಲು ಮಾಡಲು ಸೂಚಿಸಿದ್ದೇನೆ ಎಂದರು.
ಆಧಾರ ರಹಿತವಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಅಭಿಯಾನ ಮಾಡುವುದು ಎಲ್ಲರಿಗೂ ಬರುತ್ತದೆ. ಆದರೆ ಇದು ಸುಳ್ಳು ಎಂದು ಜನಕ್ಕೆ ತಿಳಿಯುತ್ತದೆ. ಇದಕ್ಕೆ ಯಾವ ಬೆಲೆಯೂ ಇಲ್ಲ. ಆದರೆ ರಾಜ್ಯದ ಹೆಸರು ಕೆಡಿಸುವ ಪ್ರಯತ್ನಕ್ಕೆ ಕಡಿವಾಣ ಹಾಕುವ ಪ್ರಯತ್ನ ನಮ್ಮದು ಎಂದರು.
ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ಸಿಎಂ ಬೊಮ್ಮಾಯಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ