Latest

ಪೇಸಿಎಂ ಪೋಸ್ಟರ್ ಅಂಟಿಸುವವರೆಗೂ ಸರ್ಕಾರ ಏನು ಮಾಡ್ತಿತ್ತು? ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಆಕ್ರೋಶ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ 40% ಕಮಿಷನ್ ಆರೋಪ ಮಾಡಿ ಪೇಸಿಎಂ ಪೋಸ್ಟರ್ ಅಭಿಯಾನ ನಡೆಸುವ ಮೂಲಕ ರಾಜಧಾನಿ ಬೆಂಗಳುರಿನ ಗೋಡೆಗಳ ಮೇಲೆ ಪೋಸ್ಟರ್ ಅಂಟಿಸಿ ಆಕ್ರೋಶ ವ್ಯಕ್ತಪಡಿಸಿತ್ತು. ಈ ವಿಚಾರ ಇದೀಗ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಚರ್ಚೆಗೆ ಕಾರಣವಾಗಿದ್ದು, ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಕಿಡಿಕಾರಿದ್ದಾರೆ.

ವಿಪಕ್ಷ ಕಾಂಗ್ರೆಸ್ ನಾಯಕರು ಪೇಸಿಎಂ ಪೋಸ್ಟರ್ ಅಂಟಿಸುವವರೆಗೆ ರಾಜ್ಯ ಗೃಹ ಇಲಾಖೆ ಏನು ಮಾಡುತ್ತಿತ್ತು? ಇಂತಹ ಪ್ರಕರಣ ನಡೆಯಲು ಅವಕಾಶ ಕೊಡಬಾರದಾಗಿತ್ತು. ಪೇಸಿಎಂ ಪೋಸ್ಟರ್ ಅಭಿಯಾನದಿಂದ ಸರ್ಕಾರಕ್ಕೆ ಮುಜುಗರವಾಗಿದೆ. ಪೋಸ್ಟರ್ ಅಂಟಿಸುವವರೆಗೆ ಸುಮ್ಮನಿದ್ದುದು ಗೃಹ ಇಲಾಖೆಯ ವೈಫಲ್ಯ ಎಂದು ಅರುಣ್ ಸಿಂಗ್ ಸಿಂಗ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ತಾಚಾರ ಆರೋಪ ಮಾಡಿದ್ದ ಕಾಂಗ್ರೆಸ್ ವಿಧಾನಮಂಡಲ ಅಧಿವೇಶನದ ವೇಳೆ ಬೆಂಗಳೂರು ನಗರದ ಗೋಡೆಗಳ ಮೇಲೆ ಪೇಸಿಎಂ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಭಾವಚಿತ್ರ ಹಾಗೂ ಕ್ಯೂ ಆರ್ ಕೋಡ್ ಇರುವ ಪೋಸ್ಟರ್ ಅಂಟಿಸಿ ಪ್ರತಿಭಟನೆ ನಡೆಸಿತ್ತು. ಪೇಸಿಎಂ ಪೋಸ್ಟರ್ ವಿಚಾರ ಇದೀಗ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಭಾರಿ ಚರ್ಚೆಗೆ ಬಂದಿದ್ದು, ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸರ್ಕಾರ ಹಾಗೂ ಗೃಹ ಇಲಾಖೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ 10 ಲಕ್ಷ ಉದ್ಯೋಗ ಸೃಷ್ಟಿ; ಶೀಘ್ರದಲ್ಲಿಯೇ ವಿವಿಧ ಯೋಜನೆಗಳು ಅನುಷ್ಠಾನಕ್ಕೆ; ಸಿಎಂ ಭರವಸೆ

https://pragati.taskdun.com/politics/cm-basavaraj-bommaikarnataka-developmentgovt-commited/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button