
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೇಟಿಎಂ ಸಂಸ್ಥಾಪಕ ಹಾಗೂ ಸಿಇಒ ವಿಜಯ್ ಶೇಖರ್ ಶರ್ಮಾ ಅವರನ್ನು ದೆಹಲಿ ಪೊಲೀಸರು ಬಂಧಿಸಿ, ಬಿಡುಗಡೆ ಮಾಡಿದ್ದಾರೆ.
ದೆಹಲಿ ದಕ್ಷಿಣ ವಲಯ ಡಿಸಿಪಿ ಕಾರಿಗೆ ಡಿಕ್ಕಿ ಹೊಡೆದ ಆರೋಪದ ಮೇಲೆ ವಿಜಯ್ ಶೇಖರ್ ಶರ್ಮಾ ಅವರನ್ನು ಐಪಿಸಿ ಸೆಕ್ಷನ್ 279ರ ಅಡಿಯಲ್ಲಿ ಬಂಧಿಸಲಾಗಿತ್ತು. ಬಳಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ವಿಜಯ್ ಶೇಖರ್ ಶರ್ಮಾ ವಿರುದ್ಧ ಕಾನ್ಸ್ ಟೇಬಲ್ ದೀಪಕ್ ಕುಮಾರ್ ಎಫ್ ಐ ಆರ್ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಫೆ.22ರದು ಬಂಧಿಸಲಗಿತ್ತು ಎಂದು ತಿಳಿದುಬಂದಿದೆ.
ಪತ್ರಕರ್ತರ ಹೆಸರಲ್ಲಿ ಸುಲಿಗೆ; ನಾಲ್ವರ ಬಂಧನ




