ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಸಿವಿಲ್ ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆಯಲ್ಲಿ ತಂತ್ರಜ್ಞಾನ ಬಳಸಿ ನಕಲು ಮಾಡಿದ ಪ್ರಕರಣವನ್ನು ರಾಜ್ಯ ಗೃಹ ಇಲಾಖೆ ಸಿಐಡಿಗೆ ಹಸ್ತಾಂತರ ಮಾಡಿದೆ.
ಪಿಸಿ ನೇಮಕ ಪರೀಕ್ಷೆಯಲ್ಲಿ ನಕಲು ಪ್ರಕರಣವನ್ನು ಸಿಐಡಿಗೆ ಹಸ್ತಾಂತರ ಮಾಡುವಂತೆ ಬೆಳಗಾವಿ ನಗರ ಪೊಲೀಸರಿಗೆ ರಾಜ್ಯ ಗೃಹ ಇಲಾಖೆ ಆದೇಶ ನೀಡಿದೆ. ಅಕ್ಟೋಬರ್ 24ರಂದು ಬೆಳಗಾವಿಯಲ್ಲಿ ನಡೆದಿದ್ದ ಪರೀಕ್ಷೆ ವೇಳೆ ಬ್ಲೂಟೂತ್ ಬಳಸಿ ನಕಲಿಗೆ ಪ್ರಯತ್ನಿಸಲಾಗಿತ್ತು.
ಈ ಹಿನ್ನೆಲೆಯಲ್ಲಿ ರಾಮತೀರ್ಥ ನಗರದಲ್ಲಿ ದಾಳಿ ನಡೆಸಿದ್ದ ಪೊಲೀಸರು ದಾಳಿ ವೇಳೆ 12 ಜನರನ್ನು ಬಂಧಿಸಿದ್ದರು. 33 ಮೊಬೈಲ್, 9 ಮಾಸ್ಟರ್ ಕಾರ್ಡ್ ಡಿವೈಸ್, 13 ಬ್ಲೂಟೂತ್, ಮೂರು ಟ್ಯಾಬ್, ಒಂದು ಲ್ಯಾಪ್ ಟಾಪ್ ವಶಕ್ಕೆ ಪಡೆದಿದ್ದರು. ಇಬ್ಬರು ಪರೀಕ್ಷಾರ್ಥಿಗಳನ್ನು ವಶಕ್ಕೆ ಪಡೆದಿದ್ದರು.
ಪಿಸಿ ಪರೀಕ್ಷೆ ನಕಲು ಪ್ರಕರಣದಲ್ಲಿ ಪೊಲೀಸ್ ಸಿಬ್ಬಂದಿಗಳ ಕೈವಾಡದ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ಪ್ರಕರಣವನ್ನು ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ