
ಪ್ರಗತಿವಾಹಿನಿ ಸುದ್ದಿ: ಆರ್.ಎಸ್.ಎಸ್ ಕಾರ್ಯಕ್ರಮದಲ್ಲಿ ಭಾಗಿಯಾದ ಹಿನ್ನೆಲೆಯಲ್ಲಿ ಪಿಡಿಒ ಓರ್ವರನ್ನು ಅಮಾನತುಗೊಳಿಸಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.
ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ರೋಡಲಬಂಡಾ ಗ್ರಾಮದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರವೀಣ್ ಕುಮಾರ್ ಅಮಾನತುಗೊಂಡವರು. ಪಂಚಾಯತ್ ರಾಜ್ ಇಲಾಖೆ ಆಯುಕ್ತೆ ಡಾ.ಅರುಂಧತಿ ಇಲಾಖೆ ತನಿಖೆ ಕಾಯ್ದಿರಿಸಿ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಆರ್.ಎಸ್.ಎಸ್ ಶತಮಾನೋತ್ಸವ ಹಿನ್ನೆಲೆಯಲ್ಲಿ ಲಿಂಗಸಗೂರು ಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅ.12ರಂದು ಪ್ರವೀಣ್ ಕುಮಾರ್ ಭಾಗಿಯಾಗಿದ್ದರು. ಈ ವೇಳೆ ನಡೆದ ಪಥಸಂಚಲನದಲ್ಲಿ ಕೈಯಲ್ಲಿ ದೊಣ್ಣೆ ಹಿಡಿದು ಗಣವೇಷಧರಿಸಿ ಪಾಲ್ಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಕರ್ನಾಟಕ ಸಿವಿಲ್ ಸೇವಾ ನಿಯಮಗಳ ಉಲ್ಲಂಘನೆ ಹಾಗೂ ಸರ್ಕಾರಿ ನೌಕರನ ತರವಲ್ಲದ ರೀತಿ ಹಿನ್ನೆಲೆಯಲ್ಲಿ ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ.