ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬಿಜೆಪಿ ಸರಕಾರದ ಆಡಳಿತ ವೈಖ್ಯರಿಗೆ ಜನರು ಬೇಸತ್ತಿದ್ದು, ಬಿಜೆಪಿಗೆ ಬುದ್ದಿ ಕಲಿಸಲು ಯಾವಾಗ ಚುನಾವಣೆ ಬರುತ್ತದೆ ಎಂದು ಕಾಯುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಮಾಜಿ ಸಚಿವ ರಾಮಲಿಂಗಾ ರಡ್ಡಿ ಹೇಳಿದ್ದಾರೆ.
ಕಂಗ್ರಾಳಿ ಬಿ ಕೆ ಗ್ರಾಮದ ಕಲ್ಮೇಶ್ವರ ನಗರದಲ್ಲಿ ಆಯೋಜಿಸಲಾಗಿದ್ದ ಪ್ರಚಾರ ಸಭೆಯಲ್ಲಿ ಸತೀಶಣ್ಣಾ ಜಾರಕಿಹೊಳಿಯವರ ಪರ ಯಾಚಿಸಿ ಅವರು ಮಾತನಾಡುತ್ತಿದ್ದರು. ಚುನಾವಣೆ ಪೂರ್ವ ಇಲ್ಲದ ಆಶ್ವಾಸನೆಗಳನ್ನು ನೀಡಿ ಮತ ಪಡೆದು ಅಧಿಕಾರಕ್ಕೆ ಬಂದ ಬಿಜೆಪಿ ಜನರನ್ನು ಸಂಪೂರ್ಣ ಮರೆತಿದೆ. ಭ್ರಷ್ಟಾಚಾರ ಮಿತಿಮೀರಿದೆ. ಬೆಲೆ ಏರಿಕೆಯಿಂದ ಜನರು ತತ್ತರಿಸಿಹೋಗಿದ್ದಾರೆ. ರಾಜ್ಯದಲ್ಲಂತೂ ಇದೆಂತಹ ಸರಕಾರ ಎಂದು ಜನ ಗೇಲಿ ಮೀಡುತ್ತಿದ್ದಾರೆ ಎಂದು ಅವರು ಹೇಳಿದರು.
ಬೆಳಗಾವಿ ಲೋಕಸಭಾ ಉಪಚುನಾವಣೆ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಮಾತನಾಡಿ, ಕಾಂಗ್ರೆಸ್ ನಿಂದ ಮಾತ್ರ ದೇಶದಲ್ಲಿ ಅಭಿವೃದ್ಧಿ ಸಾಧ್ಯ. ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ಜನಸಾಮಾನ್ಯರು ನೆಮ್ಮದಿಯಿಂದ ಬದುಕಲು ಸಾಧ್ಯ. ಹಾಗಾಗಿ ಸಂಪೂರ್ಣ ಜಿಲ್ಲೆಯ ಅಭಿವೃದ್ಧಿಗಾಗಿ ನನಗೆ ಮತ ನೀಡಿ ಎಂದು ವಿನಂತಿಸಿದರು.
ಯುವಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಮಾತನಾಡಿ, ಬಿಜೆಪಿಗೆ ಮತ ಕೇಳಲು ಯಾವ ವಿಷಯವೂ ಇಲ್ಲವಾಗಿದೆ. ಅವರೊಳಗಿನ ಗೊಂದಲ ಬಗೆಹರಿಸಿಕೊಳ್ಳಲಾಗದೆ ಒದ್ದಾಡುತ್ತಿದೆ. ಇನ್ನು ಆಡಳಿತ ನಡೆಸಲು ಅವರಿಗೆ ಸಮಯವೇ ಇಲ್ಲವಾಗಿದೆ. ಇಂತಹ ಸರಕಾರ ಕಿತ್ತೊಗೆಯಲು ಈ ಚುನಾವಣೆ ಮೂಲಕ ಸಂದೇಶ ರವಾನಿಸಬೇಕು ಎಂದು ಕೋರಿದರು.
ಲೋಕಸಭೆಯನ್ನು ಪ್ರತಿನಿಧಿಸಬಲ್ಲ ಸಮರ್ಥ ಅಭ್ಯರ್ಥಿ ಸತೀಶ್ ಜಾರಕಿಹೊಳಿ. ಅವರನ್ನು ಬೆಂಬಲಿಸುವ ಮೂಲಕ ನಮ್ಮ ಜಿಲ್ಲೆಯನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ಅವಕಾಶ ಮಾಡಿಕೊಳ್ಳೋಣ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಯರಾಮ್ ಪಾಟೀಲ, ನಾಮದೇವ್, ರಿಯಾಜ್ ಪಠಾಣ್, ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ