Belagavi NewsBelgaum NewsEducationKannada NewsKarnataka NewsLatest

*ಬೆಳಗಾವಿಯಲ್ಲಿ ಶಿಕ್ಷಣ ತಜ್ಞರ ವಿಶೇಷ ಸಭೆ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ರಾಷ್ಟ್ರೀಯ ಶಿಕ್ಷಣ ನೀತಿ-2020 ರದ್ದುಗೊಳಿಸುವ ಪ್ರಯತ್ನ ನಡೆಯುತ್ತಿದ್ದು, ಈ ನಿಟ್ಟಿನಲ್ಲಿ ಜನಮಾನಸದಲ್ಲಿ ಎನ್ ಇಪಿ-2020ರ ಜಾಗೃತಿಗಾಗಿ ಪೀಪಲ್ಸ್ ಫೋರಮ್ ಫಾರ್ ಕರ್ನಾಟಕ ಎಜುಕೇಶನ್ ವತಿಯಿಂದ ಬೆಳಗಾವಿಯಲ್ಲಿ ಶಿಕ್ಷಣ ತಜ್ಞರ ವಿಶೇಷ ಸಭೆ ನಡೆಯಲಿದೆ.

ಬೆಳಗಾವಿಯ ಲಿಂಗರಾಜ ಕಾಲೇಜು ಸಭಾಭವನದಲ್ಲಿ ಸೆ.26ರಂದು ಸಂಜೆ 4:30ಕ್ಕೆ ಸಭೆ ನಡೆಯಲಿದೆ.

ಖ್ಯಾತ ಪತ್ರಕರ್ತ ರವೀಂದ್ರ ರೇಷ್ಮೆ, ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವ ವಿದ್ಯಾಲಯ ವಿಶ್ರಾಂತ ಕುಲಪತಿ ಪ್ರೊ.ಕರಿಸಿದ್ದಪ್ಪ, ಭಾರತೀಯ ಶಿಕ್ಷಣ ಮಂಡಲದ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯೆ ಮೃಣಾಲ ಜೋಶಿ ವಕ್ತಾರರಾಗಿ ಭಾಗವಹಿಸಲಿದ್ದಾರೆ.

ಮಾಜಿ ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ, ಮಾಜಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಮಾಜಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಉಪಸ್ಥಿತರಿರಲಿದ್ದಾರೆ.

Home add -Advt


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button