Belagavi NewsBelgaum NewsKannada NewsKarnataka NewsNationalPolitics
*ಒಂದೆ ಮಳೆಯ ಆರ್ಭಟಕ್ಕೆ ಕಂಗಾಲಾದ ಬೆಳಗಾವಿ ಜನರು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನಲ್ಲಿ ಸುರಿದ ಭಾರಿ ಮಳೆ ಹಾಗೂ ಗಾಳಿಯ ಅರ್ಭಟಕ್ಕೆ ಹತ್ತಾರು ಕುಟುಂಬಗಳು ಬೀದಿ ಪಾಲಾಗುವ ಪರಿಸ್ಥಿತಿ ಎದುರಾಗಿದೆ.
ಕುಲವಳ್ಳಿ, ಕತ್ರಿದಡ್ಡಿ, ಗಂಗ್ಯಾನಟ್ಟಿ, ದಿಂಡಲಕೊಪ್ಪ ಗ್ರಾಮಗಳಲ್ಲಿ ಸುಮಾರು ಒಂದು ಗಂಟೆ ಕಾಲ ಸುರಿದ ಭಾರಿ ಮಳೆ ಗಾಳಿಯಿಂದ ಹತ್ತಾರು ಮನೆಗಳ ತಗಡಿನ ಚಾವಣಿ ಕುಸಿದು ಬಿದ್ದ ಪರಿಣಾಮ ಮನೆಯಲ್ಲಿನ ವಸ್ತುಗಳು ನಾಶವಾಗಿದ್ದಾವೆ. ಅಲ್ಲದೆ ರಸ್ತೆ ಪಕ್ಕದಲ್ಲಿರುವ 7 ವಿದ್ಯುತ್ ಕಂಬಗಳು ಹಾಗೂ ಮರಗಳು ಮಳೆಯ ಆರ್ಭಟಕ್ಕೆ ಧರೆಗುರುಳಿವೆ.
ಬೆಳಗಾವಿ ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಬುಧವಾರ ಮತ್ತು ಗುರುವಾರ ಮಳೆ ಅಬ್ಬರಿಸಿದೆ.