*ಸರ್ಕಾರದ ಬಿಟ್ಟಿ ಭಾಗ್ಯಗಳಿಂದ ಜನರು ಉದ್ದಾರ ಆಗಲ್ಲ: ರಂಭಾಪುರಿ ಶ್ರೀ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸರ್ಕಾರ ಕೊಡುತ್ತಿರುವ ಬಿಟ್ಟಿ ಭಾಗ್ಯಗಳಿಂದಾಗಿ ಜನರು ಉದ್ದಾರ ಆಗದೆ ಸೋಮಾರಿಗಳಾಗುತ್ತಿದ್ದಾರೆ ಎಂದು ಬಾಳೆಹೊನ್ನೂರಿನ ಶ್ರೀ ರಂಭಾಪುರಿ ವೀರಸೋಮೇಶ್ವರ ಮಹಾಸ್ವಾಮಿಗಳು ಹೇಳಿದ್ದಾರೆ.
ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಚಿಪ್ಪಲಕಟ್ಟಿ ಗ್ರಾಮದಲ್ಲಿ ಮಾತನಾಡಿದ ಅವರು, ಇಂದಿನ ಸರ್ಕಾರಗಳು ಕೊಡುತ್ತಿರುವ ಬಿಟ್ಟಿ ಭಾಗ್ಯಗಳಿಂದ ಜನರು ಸೋಮಾರಿಗಳಾಗುತ್ತಿದ್ದಾರೆ. ಇಂತಹ ಬಿಟ್ಟಿ ಭಾಗ್ಯ ಯೋಜನೆಗಳಿಂದ ಜನರ ಬದುಕು ಉಜ್ವಲಗೊಳ್ಳುವುದಿಲ್ಲ. ಜನರಲ್ಲಿ ದುಡಿಯುವ ಮನೋಭಾವ ಕಡಿಮೆಯಾಗುತ್ತಿದೆ. ಸೋಮಾರಿತನ ಹೆಚ್ಚಾಗುತ್ತಿದೆ ಎಂದು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳನ್ನು ಟೀಕಿಸಿದರು.
ದೇಶದಲ್ಲಿ ರೈತ ಹಾಗೂ ಯೋಧ ಎರಡು ಕಣ್ಣುಗಳಿದ್ದಂತೆ. ಯೋಧರು ದೇಶ ಕಾಯುವ ಮೂಲಕ ಜನರನ್ನು ರಕ್ಷಣೆ ಮಾಡಿದರೆ, ರೈತರು ಕಷ್ಟಪಟ್ಟು ದುಡಿಯುವ ಮೂಲಕ ಜನತೆಗೆ ಅನ್ನ ನೀಡುತ್ತಾರೆ. ಕಷ್ಟಪಟ್ಟು ದುಡಿಯುವ ರೈತರ ಕೈಯನ್ನು ಭೂಮಿತಾಯಿ ಎಂದಿಗೂ ಬಿಡುವುದಿಲ್ಲ ಎಂದು ಅವರು ಹೇಳಿದರು.
ಇದೇ ವೇಳೆ ಅವರು ಡಿಸಿಎಂ ಡಿಕೆ ಶಿವಕುಮಾರ್ ಅವರಿಗೂ ರಾಜ್ಯದ ಸಿಎಂ ಆಗಿ ಆಡಳಿತ ನಡೆಸಲು ಒಂದು ಅವಕಾಶ ಸಿಗಬೇಕು ಎಂದು ಹೇಳಿದ್ದಾರೆ.