Kannada News

ಜನ ಸಂಪರ್ಕ ಸಭೆ: ಹಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿಸಿದ ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ

ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ:  :

ಚಿಕ್ಕೋಡಿ ಪಟ್ಟಣದ ಸಂಸದರ ಕಚೇರಿಯಲ್ಲಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಮಂಗಳವಾರ  ಜನಸಂಪರ್ಕ ಸಭೆ (ಜನತಾ ದರ್ಶನ) ಆಯೋಜಿಸಿದ್ದರು.

ಲೋಕಸಭಾ ಕ್ಷೇತ್ರದ ವಿವಿಧ ಕಡೆಯಿಂದ ಸುಮಾರು ೫೦೦ ಕ್ಕೂ ಹೆಚ್ಚು ಜನ ಬಂದಿದ್ದ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಅವರ ಮನವಿಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಿದರು. ಹಾಗೂ ಕೆಲ ಅಹವಾಲಗಳಿಗೆ ಸರ್ಕಾರಿ ಅಧಿಕಾರಿಗಳಿಂದ ಸ್ಥಳದಲ್ಲಿಯೇ ಸಮಸ್ಯೆಗಳನ್ನು ಬಗೆಹರಿಸಿದರು.

ಲೋಕಸಭಾ ಕ್ಷೇತ್ರದ ಜನರ ಸಮಸ್ಯೆಯನ್ನು ಸ್ವೀಕರಿಸಿ ಪರಿಹರಿಸುವುದು ಆದ್ಯ ಕರ್ತವ್ಯವಾಗಿದ್ದು ಇಂದಿನ ಜನಸಂಪರ್ಕ ಸಭೆಯಲ್ಲಿ ಹಲವಾರು ಮನವಿಗಳನ್ನು ಸ್ವೀಕರಿಸಿದ್ದರು. ಸದ್ಯದಲ್ಲಿ ಅವರೆಲ್ಲರ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಚಿಕ್ಕೋಡಿ ಜಿಲ್ಲಾಧ್ಯಕ್ಷ ಡಾ: ರಾಜೇಶ ನೇರ್ಲಿ, ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ, ದುಂಡಪ್ಪಾ ಬೆಂಡವಾಡೆ, ಯಮಕನಮರಡಿ ರವೀಂದ್ರ ಹಂಜಿ, ಚಿಕ್ಕೋಡಿ ವಕ್ಫ್ ಬೋರ್ಡ ಅಧ್ಯಕ್ಷ ಅನವರ ದಾಡಿವಾಲೆ, ನಿಪ್ಪಾಣಿ ಹಾಲಸಿದ್ಧನಾಥ ಸಕ್ಕರೆ ಕಾರ್ಖಾನೆಯ ಸಂಚಾಲಕರಾದ ಜಯಕುಮಾರ ಖೋತ, ಚಿಕ್ಕೋಡಿ ಬಿಜೆಪಿ ಯುವ ಮೊರ್ಚಾ, ವಿಕಾಸ ಪಾಟೀಲ, ದೀಪಕ ಪಾಟೀಲ, ಲೋಕೋಪಯೋಗಿ ಕಾರ್ಯನಿರ್ವಾಹಕ ಅಭಿಯಂತರು, ವ್ಹಿ.ಎನ್.ಪಾಟೀಲ, ಚಿಕ್ಕೋಡಿಯ ತಹಸಿಲ್ದಾರ ಸಿ.ಎಸ್. ಕುಲಕರ್ಣಿ ಹಾಗೂ ತಾಲೂಕಾ ಅಧಿಕಾರಿಗಳು ಜನ ಸಂಪರ್ಕ ಸಭೆಯಲ್ಲಿ ಭಾಗಿಯಾಗಿದ್ದರು.

https://pragati.taskdun.com/politics/vidhanasabhebangalore-floodsiddaramaiaharavinda-limbavali/

 

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button