ಪ್ರಗತಿವಾಹಿನಿ ಸುದ್ದಿ, ಕಾರವಾರ – ಮಳೆಗಾಲ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಛತ್ರಿ ಮತ್ತು ರೇನ್ ಕೋಟ್ ಮಾರಾಟಕ್ಕೆ ಅನುಮತಿ ನೀಡಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಲ್ಲಿ ಕೋವಿಡ್ ನಿಮಿತ್ತ ವಿಧಿಸಲಾಗಿರುವ ಕರ್ಫ್ಯೂವನ್ನು ಜೂ.೧೪ರವರೆಗೆ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ.
ಜೂ.೧೪ರ ಬೆಳಗ್ಗೆ ೬ ಗಂಟೆಯವರೆಗೆ ಮದುವೆ ಸಮಾರಂಭಕ್ಕೆ ಅವಕಾಶವಿಲ್ಲ. ಅನಗತ್ಯ ಸಂಚಾರ ಕೈಗೊಳ್ಳುವವರ ಮೇಲೆ ಸೂಕ್ತ ಕಾನೂನು ಕ್ರಮ ವಿಧಿಸಲಾಗುತ್ತದೆ. ಆದರೆ ಪ್ರಸ್ತುತ ಮಳೆಗಾಲ ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಅಗತ್ಯ ವಸ್ತುಗಳಾದ ಛತ್ರಿ, ರೇನ್‌ಕೋಟ್ ಮೊದಲಾದ ವಸ್ತುಗಳ ಮಾರಾಟಕ್ಕೆ ಅವಕಾಶವಿದೆ.
ಸೋಮವಾರದಿಂದ ಗುರುವಾರದವರೆಗೆ ವಾರದ ನಾಲ್ಕು ದಿನಗಳ ಕಾಲ ಬೆಳಗ್ಗೆ ೮ ರಿಂದ ೧೨ ಗಂಟೆಯವರೆಗೆ ಜೀವನಾವಷ್ಯಕ ವಸ್ತುಗಳು, ಹಾಲು, ತರಕಾರಿ, ದಿನಸಿ ಮೊದಲಾದ ವಸ್ತುಗಳ ಮಾರಾಟಕ್ಕೆ ಅವಕಾಶವಿದೆ.
ಶಿರಸಿಯಲ್ಲಿ 100.22ರೂಪಾಯಿ ತಲುಪಿದ ಲೀಟರ್ ಪೆಟ್ರೋಲ್ ದರ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ