
ಶಾಶ್ವತ ಪರಿಹಾರ ಕಲ್ಪಿಸಲು ಸರ್ಕಾರದ ಮೇಲೆ ಒತ್ತಡ- ಕುಮಾರಸ್ವಾಮಿ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:
ಸಂಕೇಶ್ವರ ಪಟ್ಟಣದ ಶಂಕರಲಿಂಗ ಮಂಗಲ ಕಾರ್ಯಾಲಯದಲ್ಲಿ ಆರಂಭಿಸಲಾಗಿರುವ ಪರಿಹಾರ ಕೇಂದ್ರಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಶನಿವಾರ ಭೇಟಿ ನೀಡಿ, ಸಂತ್ರಸ್ತರ ಅಹವಾಲು ಆಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮನೆಗಳನ್ನು ಕಳೆದುಕೊಂಡಿರುವ ಸಂತ್ರಸ್ತರಿಗೆ ಸರ್ಕಾರದ ಮೂಲಕ ಮನೆ ಹಾಗೂ ಪರಿಹಾರವನ್ನು ಒದಗಿಸಲು ಪ್ರಯತ್ನಿಸಲಾಗುವುದು. ಈ ಕುರಿತು ಸರ್ಕಾರದ ಮೇಲೆ ಇನ್ನಷ್ಟು ಒತ್ತಡ ಹೇರಲಾಗುವುದು ಎಂದರು.
ಅಧಿಕಾರಿಗಳು ಯುದ್ದೋಪಾದಿಯಲ್ಲಿ ಕಾರ್ಯನಿರ್ವಹಣೆ ಮಾಡಬೇಕು. ಹಾನಿಯ ಕುರಿತು ಸಮಗ್ರ ಸಮೀಕ್ಷೆ ನಡೆಸಲು ಅಧಿಕಾರಿಗಳಿಗೆ ಇನ್ನೂ ಒಂದು ತಿಂಗಳು ಬೇಕಾಗಬಹುದು.
ಸಂತ್ರಸ್ತರಿಗೆ ಶಾಶ್ವತ ಪರಿಹಾರ ಒದಗಿಸಿಕೊಡಲು ಮುಖ್ಯಮಂತ್ರಿಗಳ ಜತೆ ಚರ್ಚೆ ನಡೆಸಲಾಗುವುದು ಎಂದು ಅವರು ಹೇಳಿದರು.
ಸಂತ್ರಸ್ತರು ಧೈರ್ಯದಿಂದ ಇರಬೇಕು. ಏನಾದರೂ ಸಮಸ್ಯೆಗಳು ಇದ್ದರೆ ವೈಯಕ್ತಿಕವಾಗಿ ಸಾಧ್ಯವಾದಷ್ಟು ಪರಿಹರಿಸಲು ಸಿದ್ದ. ನಾನು ನಿಮ್ಮೊಂದಿಗೆ ಇರುತ್ತೇನೆ ಎಂದು ಕುಮಾರಸ್ವಾಮಿ ಭರವಸೆ ನೀಡಿದರು.
ಮಾಜಿ ಸಚಿವರಾದ ಬಂಡೆಪ್ಪ ಕಾಂಶೆಂಪುರ, ಮಾಜಿ ಶಾಸಕರಾದ ಎನ್.ಎಚ್.ಕೋನರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ