
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೈಲಹೊಂಗಲ ತಾಲೂಕಿನ ಸುತಗಟ್ಟಿ ಗ್ರಾಮದಲ್ಲಿ ಮಳೆ ಸಿಡಿಲು ಬಡಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಮೂವರು ಗಾಯಗೊಂಡಿರುವ ಘಟನೆ ನಡೆದಿದೆ.
ಬಸವರಾಜ ನಾಗಪ್ಪ ಸಂಗೊಳ್ಳಿ (45) ಮೃತವ್ಯಕ್ತಿ ಎಂದು ಗುರುತಿಸಲಾಗಿದೆ. ಬಸವರಾಜ ಅವರ ಪತ್ನಿ ಹಾಗೂ ಇನ್ನಿಬ್ಬರು ಗಾಯಗೊಂಡಿದ್ದಾರೆ. ಅವರನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಜಮೀನಿನಲ್ಲಿ ಕೆಲಸ ಮುಗಿಸಿ ಮನೆಗೆ ಮರಳುವಾಗ ಸಿಡಿಲು ಬಡಿದು ಈ ದುರ್ಘಟನೆ ನಡೆದಿದೆ . ಸ್ಥಳಕ್ಕೆ ಪಿಡಿಓ ವನಜಾಕ್ಷಿ ಪಾಟೀಲ, ನೇಸರಗಿ ಪೊಲೀಸರು ಭೇಟಿ ನೀಡಿದ್ದಾರೆ.